ಸುಳ್ಯ: ಸುಳ್ಯ ನಗರದ ಕಸ ಸಮಸ್ಯೆಯ ಪರಿಹಾರಕ್ಕೆ ಶಾಸಕ ಎಸ್.ಅಂಗಾರ ನೇತೃತ್ವದಲ್ಲಿ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆ ಮೂರು ದಿನದಲ್ಲಿ ಕರೆಯಲು ನಿರ್ಧರಿಸಲಾಗಿದೆ.
ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಗುರುವಾರ ಸಂಜೆ ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕರ ಸಮಯ ಲಭಿಸಿದ ಕೂಡಲೇ ಜನಪ್ರತಿನಿಧಿಗಳು ಹಾಗು ಅಧಿಕಾರಿಗಳ ಸಭೆ ಕರೆದು ಸಮಗ್ರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು. ಒಂದು ವಾರದ ಮಟ್ಟಿಗೆ ಹಸಿ ಕಸವನ್ನು ಮಾತ್ರ ಸಂಗ್ರಹಿಸಲು ನಿರ್ಧರಿಸಲಾಯಿತು. ಪ್ಲಾಸ್ಟಿಕ್ ತ್ಯಾಜ್ಯ ನೀಡದಂತೆ ಜನರಲ್ಲಿ ಜಾಗೃತಿ ಮೂಡಿಸಲು ನಗರ ಪಂಚಾಯತ್ ಸಿಬ್ಬಂದಿಗಳಿಗೆ ಸೂಚಿಸಲಾಯಿತು.
ನ.ಪಂ. ಮುಖ್ಯಾಧಿಕಾರಿ ಎನ್.ಮತ್ತಡಿ, ನ.ಪಂ. ಮಾಜಿ ಅಧ್ಯಕ್ಷ ಎನ್.ಎ ರಾಮಚಂದ್ರ, ನ.ಪಂ ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್, ಶರೀಫ್ ಕಂಠಿ, ನ.ಪಂ. ಇಂಜಿನಿಯರ್ ಶಿವಕುಮಾರ್, ಆರೋಗ್ಯಾಧಿಕಾರಿ ರವಿಕೃಷ್ಣ, ಸ್ವಚ್ಛ ಸುಳ್ಯ ತಂಡದ ವಿನೋದ್ ಲಸ್ರಾದೋ, ಲೋಕೇಶ್ ಗುಡ್ಡೆಮನೆ ಮತ್ತಿತರರು ಉಪಸ್ಥಿತರಿದ್ದರು