ಸುಳ್ಯ: ಸುಳ್ಯ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಆದ್ಯತೆಯಾಗಿ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಸುಳ್ಯದಲ್ಲಿ ನ.ಪಂ.ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಸಂದರ್ಭ ಸುಳ್ಯ ಕಲ್ಲುಮುಟ್ಲುವಿನಲ್ಲಿ ನೀರು ಸರಬರಾಜು ಮಾಡಲು ನಿರ್ಮಿಸಿದ ತಾತ್ಕಾಲಿಕ ಒಡ್ಡು ಮತ್ತು ಪಂಪ್ ಹೌಸ್ ಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು. ತಾತ್ಕಾಲಿಕ ಒಡ್ಡು ನಿರ್ಮಿಸಿದ ಸ್ಥಳದಲ್ಲಿ ಶಾಶ್ವತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ಶಾಶ್ವತವಾಗಿ ಶುದ್ಧ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯದರ್ಶಿ ಹಾಗು ನ.ಪಂ ಅಭ್ಯರ್ಥಿ ಎಂ.ವೆಂಕಪ್ಪ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಸುಳ್ಯ, ಮುಖಂಡರಾದ ಎಸ್.ಸಂಶುದ್ದೀನ್, ಜಿ.ಕೆ.ಹಮೀದ್, ಲಕ್ಷ್ಮಣ ಶೆಣೈ, ಶಾಫಿ ಕುತ್ತಮೊಟ್ಟೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…