ಸುಳ್ಯ: ಕೇರಳ ಮತ್ತು ಕರ್ನಾಟಕದ ಗಡಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪೂರಕಾಗಬಲ್ಲ ಮತ್ತು ಎರಡೂ ರಾಜ್ಯಗಳ ಮಧ್ಯೆ ಕ್ರಾಂತಿಕಾರಿ ಸಂಪರ್ಕ ಕಲ್ಪಿಸುವ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ನಿರ್ಮಾಣಕ್ಕೆ ಎಲ್ಲಾ ಪ್ರಯತ್ನಗಳನ್ನೂ ಮಾಡಲು ಸಿದ್ಧ ಎಂದು ಕಾಸರಗೋಡಿನ ನೂತನ ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಹೇಳಿದ್ದಾರೆ.
ಕಾಞಂಗಾಡ್ ನಗರ ಅಭಿವೃದ್ಧಿ ಕ್ರಿಯಾ ಸಮಿತಿಯು ಸಂಸದರ ಜೊತೆ ನಡೆಸಿದ ಮಾತುಕತೆಯ ವೇಳೆ ಈ ಭರವಸೆ ನೀಡಿದ್ದಾರೆ. ಕೇರಳ ರಾಜ್ಯ ಸರಕಾರ ಹಳಿ ನಿರ್ಮಾಣಕ್ಕೆ ಕೈಜೋಡಿಸುವುದಾಗಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಈಗಾಗಲೇ ಪತ್ರ ನೀಡಿದ್ದಾರೆ. ಹಳಿ ನಿರ್ಮಾಣಕ್ಕೆ ಭೂ ಸ್ವಾಧೀನಕ್ಕೆ ಬೇಕಾದ ಖರ್ಚಿನ ಅರ್ಧಾಂಶವನ್ನು ನೀಡುವುದಾಗಿ ಪತ್ರದಲ್ಲಿ ತಿಳಿಸಿದೆ. ಕೇರಳ ಮುಖ್ಯಮಂತ್ರಿ ಮತ್ತು ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಈ ವಿಚಾರದ ಕುರಿತು ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಸ್ಪಷ್ಟತೆಯನ್ನು ಪಡೆಯಲಾಗುವುದು. ಕರ್ನಾಟಕ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹಳಿ ನಿರ್ಮಾಣ ವೆಚ್ಚದ ಅರ್ಧ ಖರ್ಚನ್ನು ಭರಿಸಲು ಕರ್ನಾಟಕ ರಾಜ್ಯ ಒಪ್ಪುವಂತೆ ವಿನಂತಿಸಲಾಗುವುದು. ಕೇಂದ್ರ ರೈಲ್ವೇ ಖಾತೆ ಸಚಿವರನ್ನು ಮತ್ತು ರೈಲ್ವೇ ಬೋರ್ಡ್ ಅಧ್ಯಕ್ಷರನ್ನು ಭೇಟಿ ಮಾಡಿ ಕಾಞಂಗಾಡ್-ಕಾಣಿಯೂರು ಹಳಿ ಎಂಬ ಕನಸನ್ನು ನನಸು ಮಾಡಲು ಎಲ್ಲಾ ಪ್ರಯತ್ನಗಳನ್ನೂ ಮಾಡಲಾಗುವುದು ಎಂದು ರಾಜ್‍ಮೋಹನ್ ಉಣ್ಣಿತ್ತಾನ್ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…