ಪುತ್ತೂರು: ಭಜನೆಯು ದೇವರನ್ನು ಕಾಣುವ ಪ್ರಯತ್ನವಾಗಿದ್ದು, ಭಜನಾ ಟ್ರಸ್ಟ್ ನಿರ್ಮಾಣದ ಮೂಲಕ ಸಂಘಟನಾತ್ಮಕವಾಗಿ ಭಗವಂತನನ್ನು ಕಾಣುವ ಪ್ರಯತ್ನವಾಗಿದೆ. ಭಜನೆಯು ಪ್ರೇರಣೆ ಸಂಘಟಿತವಾಗಿ ಬೆಳೆದಂತೆ ಸಮಾಜದಲಿ ಋಣಾತ್ಮಕ ಆಂಶಗಳು ದೂರವಾಗಲಿದೆ ಎಂದು ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಕಮಲಾದೇವಿ ಪ್ರಸಾದ್ ಅಸ್ರಣ್ಣ ಹೇಳಿದರು.
ಅವರು ಪುತ್ತೂರು ಶ್ರಿ ಮಹಾಲಿಂಗೇಶ್ವರ ದೇವಳದ ನಟರಾಜವೇದಿಕೆಯಲ್ಲಿ ನಡೆದ ಕಾಟುಕುಕ್ಕೆ ಭಜನ ಚಾರಿಟೇಬಲ್ ಟ್ರಸ್ಟ್ ಉದ್ಘಾಟಿಸಿ ಮಾತನಾಡಿದರು.
ಅತಿಥಿಯಾಗಿ ಭಾಗವಹಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ನಮ್ಮ ಸಂಸ್ಕøತಿಯ ಭಾಗವಾಗಿದ್ದು, ಇದೀಗ ಅಳಿವಿನಂಚಿನಲ್ಲಿರುವ ಭಜನೆ, ಸಂಕೀರ್ತನೆಗಳನ್ನು ಮತ್ತೊಮ್ಮೆ ಬೆಳೆಸುವ ಪ್ರಯತ್ನ ಟ್ರಸ್ಟ್‍ನಿಂದ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಭಜನೆ ಹಾಡುವುದರಿಂದ ಮಕ್ಕಳಲ್ಲಿ ಸಾಹಿತ್ಯದ ಜೊತೆಗೆ ಜ್ಞಾನ ಮತ್ತು ಸಂಸ್ಕಾರದ ಬೆಳವಣಿಗೆಯಾಗುತ್ತದೆ ಎಂದರು.
ಹನುಮಗಿರಿ ಶ್ರೀ ರಾಮಾಂಜನೇಯ ದೇವಸ್ಥಾನದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಾರಂಪಾಡಿ ಉಮಾಮಹೇಶ್ವರ ದೇವಸ್ಥಾನದ ಉಪಾಧ್ಯಕ್ಷ ಮಧುಕರ ರೈ, ಮುಂಬಯಿಯ ಉದ್ಯಮಿ ಕುಕ್ಕುಂದೂರು ಚಂದ್ರಶೇಖರ ಶೆಟ್ಟಿ, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಭಜನಾಮೃತ ಭಾಗ-1, ಭಾಗ 2 ಮತ್ತು ವಿಜಯದಾಸರ ಪಂಚರತ್ನ ಸುಳಾದಿ ಎಂಬ ಭಜನ ಸಾಹಿತ್ಯ ಪುಸ್ತಕ ಬಿಡುಗಡೆಗೊಳಿಸಲಾಯಿತು.
ಟ್ರಸ್ಟ್‍ನ ಅಧ್ಯಕ್ಷ ರಾಮಕೃಷ್ಣ ಕಾಟುಕುಕ್ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಟ್ರಸ್ಟ್‍ನ ಉಪಾಧ್ಯಕ್ಷ ಜಯರಾಮ ನೆಲ್ಲಿತ್ತಾಯ ಸ್ವಾಗತಿಸಿದರು. ಪತ್ರಕರ್ತ ಎಂ.ನಾ. ಚಂಬಲ್ತಿಮಾರ್ ಕಾರ್ಯಕ್ರಮ ನಿರ್ವಹಿಸಿದರು.
ಸಭಾ ಕಾರ್ಯಕ್ರಮಕ್ಕೆ ಮೊದಲು ಕಿಶೋರ್ ಪೆರ್ಲ ಮತ್ತು ಸಂಗಡಿಗರಿಂದ ದಾಸಭಕ್ತಿ ಭಜನಾಮೃತ ಹಾಗೂ ಭಜನಾರ್ಥಿಗಳಿಂದ ಸಮೂಹ ಗಾಯನ ನಡೆಯಿತು.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…