ಕಾಣಿಯೂರು: ಕಾಣಿಯೂರು ಉಪ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿ ಇದೀಗ ಪುತ್ತೂರು ಅಂಚೆ ಕಚೇರಿಗೆ ವರ್ಗಾವಣೆಗೊಂಡಿರುವ ಅಶ್ವತ್. ಎ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವು ಕಾಣಿಯೂರು ಹಾಗೂ ಬ್ರಾಂಚ್ ಆಫೀಸಿನ ಸಹಕಾರದೊಂದಿಗೆ ಕಾಣಿಯೂರು ಉಪ ಅಂಚೆ ಕಚೇರಿಯಲ್ಲಿ ನಡೆಯಿತು. ಕಡಬದಿಂದ ವರ್ಗಾವಣೆಗೊಂಡು ಕಾಣಿಯೂರು ಅಂಚೆ ಪಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುರುಳ್ಯ ಬ್ರಾಂಚ್‌ನ ಪೋಸ್ಟ್ ಮಾಸ್ಟರ್ ಬಾಲಕೃಷ್ಣ ಗೌಡ ಎ ಇವರು ಅಶ್ವತ್‌ರವರಿಗೆ ಶಾಲು ಹೊದಿಸಿ ಫಲ ಪುಷ್ಪದೊಂದಿಗೆ ಕಿರುಕಾಣಿಕೆಯನ್ನು ನೀಡಿ ಗೌರವಿಸಿ ಶುಭಹಾರೈಸಿದರು.
ಇದೆ ವೇಳೆ ಅಶ್ವತ್‌ರವರು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಬ್ರಾಂಚ್ ಆಫೀಸಿನ ಯಶೋಧ, ನಾರಾಯಣ ಗೌಡ, ಯೋಗಿಶ, ಜಯ ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸಹಕಾರ ನೀಡಿದ ಅಂಚೆಪಾಲಕರಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ನೂತನ ಅಂಚೆ ಪಾಲಕ ಅಣ್ಣುರವರು ಮಾತನಾಡಿ ಬ್ರಾಂಚ್ ಆಫೀಸಿನವರು ಎಲ್ಲರೂ ಮುಂದೆಯೂ ಉತ್ತಮ ರೀತಿಯಲ್ಲಿ ಸಹಕಾರ ನೀಡಬೇಕು. ನಾವೆಲ್ಲರೂ ಯಾವುದೇ ತಾರತಮ್ಯವಿಲ್ಲದೆ ಒಗ್ಗಟ್ಟಿನಿಂದ ಕೆಲಸವನ್ನು ಮಾಡೋಣ ಎಂದು ಹೇಳಿ ವರ್ಗಾವಣೆಗೊಂಡ ಅಶ್ವತ್‌ರಿಗೆ ಶುಭ ಹಾರೈಸಿದರು.
ಕಾಣಿಯೂರಿನ ಪೋಸ್ಟ್ ಮ್ಯಾನ್ ಉಮೇಶ್ ಪ್ರಾಸ್ತಾವಿಕದೊಂದಿಗೆ, ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಯ ಕಾಣಿಯೂರು ವಂದಿಸಿದರು. ಈ ಸಂದರ್ಭದಲ್ಲಿ ಬ್ರಾಂಚ್ ಆಫೀಸಿನ ಬಾಲಕೃಷ್ಣ ಗೌಡ, ವೆಂಕಪ್ಪ ಗೌಡ ಮುರುಳ್ಯ, ಯಶೋಧ, ರಮೇಶ್ ಬೊಬ್ಬೆಕೇರಿ, ನಾರಾಯಣ ಗೌಡ, ತಾರಿಕಾ ಚಾರ್ವಾಕ, ಯೋಗಿಶ್ ದೋಳ್ಪಾಡಿ ಹಾಗೂ ಕಾಣಿಯೂರು ಶಿವ ಸ್ಟುಡಿಯೋ ಮಾಲಕರಾದ ವಸಂತ ಕೋಡಂದೂರು, ಬೆಳಂದೂರು ಗ್ರಾ.ಪಂ ಸದಸ್ಯ ಜಯಂತ ಅಬೀರ, ಕರಿಯಪ್ಪ, ಮೋಹಿನಿ ಮತ್ತಿರರು ಉಪಸ್ಥಿತರಿದ್ದರು.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …