Advertisement
ಸುದ್ದಿಗಳು

ಕಾಣಿಯೂರು ಅಂಚೆ ಪಾಲಕ ಅಶ್ವತ್ ರವರಿಗೆ ಬೀಳ್ಕೊಡುಗೆ

Share

ಕಾಣಿಯೂರು:  ಕಾಣಿಯೂರು ಉಪ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿ ಇದೀಗ ಪುತ್ತೂರು ಅಂಚೆ ಕಚೇರಿಗೆ ವರ್ಗಾವಣೆಗೊಂಡಿರುವ ಅಶ್ವತ್. ಎ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವು ಕಾಣಿಯೂರು ಹಾಗೂ ಬ್ರಾಂಚ್ ಆಫೀಸಿನ ಸಹಕಾರದೊಂದಿಗೆ ಕಾಣಿಯೂರು ಉಪ ಅಂಚೆ ಕಚೇರಿಯಲ್ಲಿ ನಡೆಯಿತು. ಕಡಬದಿಂದ ವರ್ಗಾವಣೆಗೊಂಡು ಕಾಣಿಯೂರು ಅಂಚೆ ಪಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುರುಳ್ಯ ಬ್ರಾಂಚ್‌ನ ಪೋಸ್ಟ್ ಮಾಸ್ಟರ್ ಬಾಲಕೃಷ್ಣ ಗೌಡ ಎ ಇವರು ಅಶ್ವತ್‌ರವರಿಗೆ ಶಾಲು ಹೊದಿಸಿ ಫಲ ಪುಷ್ಪದೊಂದಿಗೆ ಕಿರುಕಾಣಿಕೆಯನ್ನು ನೀಡಿ ಗೌರವಿಸಿ ಶುಭಹಾರೈಸಿದರು.

ಇದೆ ವೇಳೆ  ಅಶ್ವತ್‌ರವರು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಬ್ರಾಂಚ್ ಆಫೀಸಿನ ಯಶೋಧ, ನಾರಾಯಣ ಗೌಡ, ಯೋಗಿಶ, ಜಯ ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸಹಕಾರ ನೀಡಿದ ಅಂಚೆಪಾಲಕರಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ನೂತನ ಅಂಚೆ ಪಾಲಕ ಅಣ್ಣುರವರು ಮಾತನಾಡಿ ಬ್ರಾಂಚ್ ಆಫೀಸಿನವರು ಎಲ್ಲರೂ ಮುಂದೆಯೂ ಉತ್ತಮ ರೀತಿಯಲ್ಲಿ ಸಹಕಾರ ನೀಡಬೇಕು. ನಾವೆಲ್ಲರೂ ಯಾವುದೇ ತಾರತಮ್ಯವಿಲ್ಲದೆ ಒಗ್ಗಟ್ಟಿನಿಂದ ಕೆಲಸವನ್ನು ಮಾಡೋಣ ಎಂದು ಹೇಳಿ ವರ್ಗಾವಣೆಗೊಂಡ ಅಶ್ವತ್‌ರಿಗೆ ಶುಭ ಹಾರೈಸಿದರು.

ಕಾಣಿಯೂರಿನ ಪೋಸ್ಟ್ ಮ್ಯಾನ್ ಉಮೇಶ್ ಪ್ರಾಸ್ತಾವಿಕದೊಂದಿಗೆ, ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಯ ಕಾಣಿಯೂರು ವಂದಿಸಿದರು. ಈ ಸಂದರ್ಭದಲ್ಲಿ ಬ್ರಾಂಚ್ ಆಫೀಸಿನ ಬಾಲಕೃಷ್ಣ ಗೌಡ, ವೆಂಕಪ್ಪ ಗೌಡ ಮುರುಳ್ಯ, ಯಶೋಧ, ರಮೇಶ್ ಬೊಬ್ಬೆಕೇರಿ, ನಾರಾಯಣ ಗೌಡ, ತಾರಿಕಾ ಚಾರ್ವಾಕ, ಯೋಗಿಶ್ ದೋಳ್ಪಾಡಿ ಹಾಗೂ ಕಾಣಿಯೂರು ಶಿವ ಸ್ಟುಡಿಯೋ ಮಾಲಕರಾದ ವಸಂತ ಕೋಡಂದೂರು, ಬೆಳಂದೂರು ಗ್ರಾ.ಪಂ ಸದಸ್ಯ ಜಯಂತ ಅಬೀರ, ಕರಿಯಪ್ಪ, ಮೋಹಿನಿ ಮತ್ತಿರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

32 minutes ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

3 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

3 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago