ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲು ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್ (15) ಶವ ಕಾಲೇಜಿನ ಪಕ್ಕದ ದೊಡ್ಡದಾದ ಇಂಗು ಗುಂಡಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ.
ಚಾರ್ವಾಕ ಗ್ರಾಮದ ಬೊಮ್ಮೊಳಿಕೆ ನಿವಾಸಿ ಲಕ್ಷ್ಮಣ ಗೌಡರ ಪುತ್ರ ಗೌತಮ್ ನೀರಿಗೆ ಸ್ನಾನಕ್ಕೆ ಇಳಿದು ಈ ದುರ್ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವಿತ್ತು. ಬೆಳಿಗ್ಗೆಯಿಂದ ಸಂಜೆ 3.30 ರ ತನಕ ಕಾರ್ಯಕ್ರಮ ನಡೆದಿತ್ತು ಈ ಮಧ್ಯೆ ಈತ ಹೊರ ಬಂದು ವಿಶಾಲ ಹಾಗೂ ಆಳವಿರುವ ಇಂಗು ಗುಂಡಿಗೆ ಇಳಿದಿರಬಹುದೆಂದು ಶಂಕಿಸಲಾಗಿದೆ. ಈತ ಸಂಜೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಮನೆಯವರು ಹಾಗೂ ನೆರೆಹೊರೆಯವರು ಹುಡುಕಾಟ ಶುರು ಮಾಡಿಕೊಂಡಿದ್ದಾರೆ.
ನೆರೆಯ ಗಣೇಶ್ ಉದನಡ್ಕ ಹಾಗೂ ಇತರರು ಕಾಲೇಜಿಗೆ ಬಂದು ಸುತ್ತ ಹುಡುಕಾಟ ನಡೆಸಿದ್ದಾರೆ. ಇಂಗು ಗುಂಡಿಯ ಬಳಿ ಬಂದಾಗ ಬಾಲಕನ ಪ್ಯಾಂಟ್, ಶರ್ಟ್ ಚಪ್ಪಲಿ ಕಂಡು ಬಂತು, ಪ್ಯಾಂಟ್ ಜೇಬಿನಲ್ಲಿ ಆತನ ಬಸ್ ಪಾಸ್ ಪತ್ತೆಯಾಯಿತು. ತಕ್ಷಣ ಬೆಳ್ಳಾರೆ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ ಗ್ರಾಮಸ್ಥರು , ಪೋಲೀಸರ ಆಗಮನದ ಬಳಿಕ ಸ್ಥಳೀಯರೊಬ್ಬರು ಇಂಗು ಗುಂಡಿಗೆ ಇಳಿದು ಜಾಲಾಡಿದಾಗ ಬಾಲಕನ ಶವ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಬೆಳ್ಳಾರೆ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…