ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯಿಂದ ಶ್ರೀ ಸತ್ಯನಾರಾಯಣ ಪೂಜೆ

May 2, 2019
10:11 AM

ಕಾಣಿಯೂರು:ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ  43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ  ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ,  ದೇವರ ಮೇಲೆ ಭಕ್ತಿಯಿದ್ದಾಗ, ದೇವರ ಆದೇಶವನ್ನು ಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ದೊರೆಯಲು ಸಾಧ್ಯವಾಗುತ್ತದೆ . ಸತ್ಯನಾರಾಯಣ ದೇವರ ಆರಾಧನೆ ಮಾಡುವುದರಿಂದ ಸಕಲ ಫಲಗಳು ಪ್ರಾಪ್ತಿಯಾಗಿ ಬದುಕಿನ ಉನ್ನತ್ತಿಯಾಗುತ್ತದೆ. ಸಾಮೂಹಿಕ ಭಜನೆಯಿಂದ, ಭಕ್ತಿ ಭಾವದ ಆರಾಧನೆಯಿಂದ ಮನಶಾಂತಿ ಸಿಗುತ್ತದೆ ಎಂದರು.

ಅರ್ಚಕರಾದ ಸತ್ಯನಾರಾಯಣ ಕಾರಂತ ರಾಮಕುಂಜ, ಅನಂತರಾಮ ಉಪಾಧ್ಯಾಯ ತುಂಬ್ಯ, ದೀಪಕ್ ಕಲ್ಪಡ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು.

ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ ಸ್ವಾಗತಿಸಿದರು. ಮಂಡಳಿಯ ಪದಾಧಿಕಾರಿಗಳು ಸ್ವಾಮೀಜಿಯವರಿಗೆ ಫಲವಸ್ತು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ವಾಸುದೇವ ನಾಯ್ಕ್ ತೋಟ, ಕಾರ್ಯದರ್ಶಿ ಜಯಂತ ಅಬೀರ ಹಾಗು ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror