ಕಾಣಿಯೂರು:ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.
ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ದೇವರ ಮೇಲೆ ಭಕ್ತಿಯಿದ್ದಾಗ, ದೇವರ ಆದೇಶವನ್ನು ಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ದೊರೆಯಲು ಸಾಧ್ಯವಾಗುತ್ತದೆ . ಸತ್ಯನಾರಾಯಣ ದೇವರ ಆರಾಧನೆ ಮಾಡುವುದರಿಂದ ಸಕಲ ಫಲಗಳು ಪ್ರಾಪ್ತಿಯಾಗಿ ಬದುಕಿನ ಉನ್ನತ್ತಿಯಾಗುತ್ತದೆ. ಸಾಮೂಹಿಕ ಭಜನೆಯಿಂದ, ಭಕ್ತಿ ಭಾವದ ಆರಾಧನೆಯಿಂದ ಮನಶಾಂತಿ ಸಿಗುತ್ತದೆ ಎಂದರು.
ಅರ್ಚಕರಾದ ಸತ್ಯನಾರಾಯಣ ಕಾರಂತ ರಾಮಕುಂಜ, ಅನಂತರಾಮ ಉಪಾಧ್ಯಾಯ ತುಂಬ್ಯ, ದೀಪಕ್ ಕಲ್ಪಡ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು.
ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ ಸ್ವಾಗತಿಸಿದರು. ಮಂಡಳಿಯ ಪದಾಧಿಕಾರಿಗಳು ಸ್ವಾಮೀಜಿಯವರಿಗೆ ಫಲವಸ್ತು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ವಾಸುದೇವ ನಾಯ್ಕ್ ತೋಟ, ಕಾರ್ಯದರ್ಶಿ ಜಯಂತ ಅಬೀರ ಹಾಗು ಸದಸ್ಯರು ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…