ಕಾನೂನು ಬಾಹಿರ ತಂಬಾಕು ವಸ್ತು ಮಾರಾಟಗಾರರ ಮೇಲೆ ಸೂಕ್ತ ಕ್ರಮ – ಜಿಲ್ಲಾಧಿಕಾರಿ

February 24, 2020
6:06 PM

ಮಂಗಳೂರು: ಕಾನೂನುಬಾಹಿರವಾಗಿ ತಂಬಾಕು ವಸ್ತುಗಳನ್ನು ವ್ಯಾಪಾರ ಮಾಡುವವರ ಮೇಲೆ ಹದ್ದಿನ ನಿಗಾ ವಹಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ದ.ಕ ಜಿಲ್ಲಾಧಿಕಾರಿ ಸಿಂಧು.ಬಿ ರೂಪೇಶ್ ಹೇಳಿದರು.

Advertisement

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದ.ಕ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು.     ಶಾಲಾ ಕಾಲೇಜು ಸಮೀಪ ಪರಿಸರದಲ್ಲಿ ತಂಬಾಕು ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈ ಮೊದಲು ರೂ.200 ದಂಡ ವಿಧಿಸಿದ್ದರೂ, ಮತ್ತೆ ಅದೇ ವ್ಯಾಪಾರವನ್ನು ಮುಂದುವರೆಸುತ್ತಿರುವುದು ಸಂಬಂಧ ಪಟ್ಟ ಇಲಾಖೆಯ ಗಮನಕ್ಕೆ  ಬಂದಿರುತ್ತದೆ. ಇಂತಹ ಪ್ರಕ್ರಿಯೆಯನ್ನು ಮುಂದುವರೆಸುತ್ತಿರುವ,   ಪುನರಾವರ್ತಿತ ಅಪರಾಧಿಗಳನ್ನು ಪತ್ತೆ ಹಚ್ಚಿ ಅಂತಹ ವ್ಯಾಪಾರಸ್ಥರ ಅಂಗಡಿಗಳನ್ನು ಗುರುತಿಸಿ ಪಟ್ಟಿ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ, ಕಾಲೇಜು ವ್ಯಾಪ್ತಿಗಳಲ್ಲಿರುವ ಅಂಗಡಿಗಳಲ್ಲಿ ತಂಬಾಕು ವಸ್ತುಗಳನ್ನು ಮಾರಾಟ ಮಾಡುತ್ತಿರುವ ಕುರಿತು ಸಂಬಂಧಪಟ್ಟ ಶಾಲಾ ಸಿಬ್ಬಂದಿ ವರ್ಗ ಗಮನ ಹರಿಸಬೇಕು, ಮತ್ತು ಶಾಲಾ ಕಾಲೇಜು ವ್ಯಾಪ್ತಿಯಲ್ಲಿನ ಅಂಗಡಿಗಳಿಗೆ ಆಯಾ ಸಂಸ್ಥೆಗಳಿಂದ ತಂಬಾಕು ಮುಕ್ತ ಅಂಗಡಿ ಎಂದು ಘೋಷಣೆ ಹೊರಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಕೆಲವು ಇಲಾಖೆಗಳ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿರುವ  ಹೋರ್ಡಿಂಗ್ಸ್‍ನಲ್ಲಿ ತಂಬಾಕು ನಿಯಂತ್ರಣ ಕುರಿತು ಜಾಹೀರಾತು ನೀಡುವ ಕುರಿತು ಸಭೆಯಲ್ಲಿ ಸಲಹೆಗಳನ್ನು ನೀಡಲಾಯಿತು. ನಗರ, ಹಳ್ಳಿ ಪ್ರದೇಶಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಸುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ  ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್, ಸಂಬಂಧ ಪಟ್ಟ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |
April 28, 2025
10:21 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 28-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಮಳೆ | ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣ
April 28, 2025
2:22 PM
by: ಸಾಯಿಶೇಖರ್ ಕರಿಕಳ
ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ
April 28, 2025
7:02 AM
by: The Rural Mirror ಸುದ್ದಿಜಾಲ
“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್
April 28, 2025
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group