ಕಾಫಿ ಬೆಳೆಗಾರರ ಸಂಕಷ್ಟದ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ ಬೆಳೆಗಾರರ ಒಕ್ಕೂಟ

June 28, 2019
12:30 PM

ಮಡಿಕೇರಿ : ಕಾಫಿ ಕೃಷಿಕರ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಕೇಂದ್ರದ ವಾಣಿಜ್ಯ ಸಚಿವ ಮತ್ತು ರಸಗೊಬ್ಬರ ಖಾತೆ ಸಚಿವರನ್ನು ಭೇಟಿಯಾಗಿ ಸಮಸ್ಯೆ ಪರಿಹಾರ ಸಂಬಂಧಿತ ಮನವಿ ಸಲ್ಲಿಸಿದೆ. ಬೆಳೆಗಾರರಿಗೆ ಅಗತ್ಯವಾಗಿರುವ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕದ ಕಾಫಿ ಜಿಲ್ಲೆಗಳ ಸಂಸದರ ನೇತೃತ್ವದಲ್ಲಿನ ಬೆಳೆಗಾರರ ನಿಯೋಗವು ಸಚಿವರನ್ನು ಒತ್ತಾಯಿಸಿದೆ.

Advertisement

ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್.ಬೋಜೇಗೌಡ, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀರ್ಥಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಮುರಳೀಧರ್ ಎಸ್.ಬಕ್ಕರವಳ್ಳಿ, ಉಪಾಧ್ಯಕ್ಷರಾದ ನಂದಾಬೆಳ್ಳಿಯಪ್ಪ, ಡಿ.ಎಂ.ವಿಜಯ್, ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್ ಅವರುಗಳನ್ನು ಒಳಗೊಂಡ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಸಂಸಸ್ ಸದಸ್ಯರಾದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ, ಪ್ರಜ್ವಲ್ ರೇವಣ್ಣ, ಪಿ.ಸಿ.ಮೋಹನ್ ಅವರು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಎನ್.ಪಿ.ಕೆ.  ಹಾಗೂ ಮೈಕ್ರೋನ್ಯೂಟ್ರಿಯಂಟ್ ಗಳನ್ನು ಒಳಗೊಂಡಿರುವ ಕಾಫಿ ವಿಶೇಷ ಗೊಬ್ಬರಕ್ಕಾಗಿ ಮನವಿ ಪತ್ರವನ್ನು ಸಲ್ಲಿಸಿ ನಿಯೋಗದಿಂದ ಚರ್ಚಿಸಿತು.

ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ನಿಯೋಗವು ಕಳೆದ ವರ್ಷ ಮಹಾಮಳೆಯಿಂದಾಗಿ ಕಾಫಿ ಬೆಳೆ ಮತ್ತು ಆಸ್ತಿ ಹಾನಿ ತೀವ್ರವಾಗಿ ಉಂಟಾಗಿದ್ದು  ಕೃಷಿಕರು ಸಂಕಷ್ಟು ಎದುರಿಸುತ್ತಿದ್ದಾರೆ. ಆ ನಂತರದ 160 ದಿನಗಳ ಬರಗಾಲದಿಂದಾಗಿ ಮುಂದಿನ ವರ್ಷಗಳಲ್ಲಿ ಬೆಳೆನಷ್ಟವಾಗುವ ಎಲ್ಲಾ ಸಾಧ್ಯತೆಗಳಿದೆ. 26 ವರ್ಷಗಳಿಗೆ ಹೋಲಿಸಿದರೆ ಈಗ ಕಾಫಿ ಬೆಲೆ ಅತ್ಯಂತ ಕಡಮೆಯಾಗಿದೆ. 30 ಜೂನ್ 2019 ಕ್ಕೆ ಅನ್ವಯಿಸುವಂತೆ ಕಾಫಿ ಸಾಲದ ಮೇಲೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿತು.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group