ಮಡಿಕೇರಿ : ಕಾಫಿ ಕೃಷಿಕರ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಕೇಂದ್ರದ ವಾಣಿಜ್ಯ ಸಚಿವ ಮತ್ತು ರಸಗೊಬ್ಬರ ಖಾತೆ ಸಚಿವರನ್ನು ಭೇಟಿಯಾಗಿ ಸಮಸ್ಯೆ ಪರಿಹಾರ ಸಂಬಂಧಿತ ಮನವಿ ಸಲ್ಲಿಸಿದೆ. ಬೆಳೆಗಾರರಿಗೆ ಅಗತ್ಯವಾಗಿರುವ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕದ ಕಾಫಿ ಜಿಲ್ಲೆಗಳ ಸಂಸದರ ನೇತೃತ್ವದಲ್ಲಿನ ಬೆಳೆಗಾರರ ನಿಯೋಗವು ಸಚಿವರನ್ನು ಒತ್ತಾಯಿಸಿದೆ.
ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್.ಬೋಜೇಗೌಡ, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀರ್ಥಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಮುರಳೀಧರ್ ಎಸ್.ಬಕ್ಕರವಳ್ಳಿ, ಉಪಾಧ್ಯಕ್ಷರಾದ ನಂದಾಬೆಳ್ಳಿಯಪ್ಪ, ಡಿ.ಎಂ.ವಿಜಯ್, ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್ ಅವರುಗಳನ್ನು ಒಳಗೊಂಡ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಸಂಸಸ್ ಸದಸ್ಯರಾದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ, ಪ್ರಜ್ವಲ್ ರೇವಣ್ಣ, ಪಿ.ಸಿ.ಮೋಹನ್ ಅವರು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಎನ್.ಪಿ.ಕೆ. ಹಾಗೂ ಮೈಕ್ರೋನ್ಯೂಟ್ರಿಯಂಟ್ ಗಳನ್ನು ಒಳಗೊಂಡಿರುವ ಕಾಫಿ ವಿಶೇಷ ಗೊಬ್ಬರಕ್ಕಾಗಿ ಮನವಿ ಪತ್ರವನ್ನು ಸಲ್ಲಿಸಿ ನಿಯೋಗದಿಂದ ಚರ್ಚಿಸಿತು.
ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ನಿಯೋಗವು ಕಳೆದ ವರ್ಷ ಮಹಾಮಳೆಯಿಂದಾಗಿ ಕಾಫಿ ಬೆಳೆ ಮತ್ತು ಆಸ್ತಿ ಹಾನಿ ತೀವ್ರವಾಗಿ ಉಂಟಾಗಿದ್ದು ಕೃಷಿಕರು ಸಂಕಷ್ಟು ಎದುರಿಸುತ್ತಿದ್ದಾರೆ. ಆ ನಂತರದ 160 ದಿನಗಳ ಬರಗಾಲದಿಂದಾಗಿ ಮುಂದಿನ ವರ್ಷಗಳಲ್ಲಿ ಬೆಳೆನಷ್ಟವಾಗುವ ಎಲ್ಲಾ ಸಾಧ್ಯತೆಗಳಿದೆ. 26 ವರ್ಷಗಳಿಗೆ ಹೋಲಿಸಿದರೆ ಈಗ ಕಾಫಿ ಬೆಲೆ ಅತ್ಯಂತ ಕಡಮೆಯಾಗಿದೆ. 30 ಜೂನ್ 2019 ಕ್ಕೆ ಅನ್ವಯಿಸುವಂತೆ ಕಾಫಿ ಸಾಲದ ಮೇಲೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿತು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…