Advertisement
ಸುದ್ದಿಗಳು

ಕಾರಂತರು ಈಗ ಹೆಚ್ಚು ಪ್ರಸ್ತುತ- ಜಯಂತ ಕಾಯ್ಕಿಣಿ

Share

ಪುತ್ತೂರು: ಡಾ. ಶಿವರಾಮ ಕಾರಂತರು ಹಿಂದೆಂದಿಗಿಂತಲೂ ಕಾರಂತರು ಈಗ ಹೆಚ್ಚು ಪ್ರಸ್ತುತ. ಜಾತಿ, ಧರ್ಮ, ಭಾಷೆ, ಲಿಂಗಗಳ ಹೆಸರಿನಲ್ಲಿ ಮನುಷ್ಯರನ್ನು ಒಡೆಯುವ ರಾಜಕಾರಣ ಮಾಡುವ ಕಾಲದಲ್ಲಿ ಕಾರಂತರಂಥ ಪ್ರತ್ಯೇಕತಾವಾದಿಯಲ್ಲದ ಏಕತಾವಾದಿ ಪ್ರಸ್ತುತರಾಗುತ್ತಾರೆ ಎಂದು ಕವಿ ಜಯಂತ ಕಾಯ್ಕಿಣಿ ಹೇಳಿದರು.

ಕನ್ನಡ ಮತ್ತು ಸಂಸ್ಕತಿ ಇಲಾಖೆ ಬೆಂಗಳೂರು, ಶಿವರಾಮ ಕಾರಂತ ಬಾಲವನ ಪುತ್ತೂರು ಮತ್ತು ಸಹಾಯಕ ಆಯುಕ್ತರ ಕಚೇರಿ ಪುತ್ತೂರು ಸಂಯುಕ್ತ ಆಶ್ರಯದಲ್ಲಿ ಬಾಲವನದಲ್ಲಿ ನಡೆದ ಡಾ.ಕೆ.ಶಿವರಾಮ ಕಾರಂತರ 118ನೇ ಜನ್ಮ ದಿನೋತ್ಸವ ಕಾರ್ಯಕ್ರಮದ ಸಮಾರೋಪದಲ್ಲಿ ಬಾಲವನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಜಿಲ್ಲಾಧಿಕಾರಿ ಸಿಂಧೂ ವಿ. ರೂಪೇಶ್, ಕಾರಂತರ ಪುತ್ರಿ ಕ್ಷಮಾ ರಾವ್, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ.ಚಿದಾನಂದ ಕೆ.ವಿ, ಪುತ್ತೂರು ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ, ವಿಶ್ರಾಂತ ಪ್ರಾಂಶುಪಾಲ ಡಾ. ಮಾಧವ ಭಟ್, ಬಾಲವನ ಅಭಿವೃದ್ಧಿ ಸಮಿತಿ ಸದಸ್ಯ ಸವಣೂರು ಸೀತಾರಾಮ ರೈ, ರಾಜ್ಯ ಸಮಿತಿ ಸದಸ್ಯ ಐ.ಕೆ.ಬೊಳುವಾರ್, ತಹಸೀಲ್ದಾರ್ ಅನಂತ ಶಂಕರ್, ತಾಪಂ ಇಒ ನವೀನ್ ಭಂಡಾರಿ ಉಪಸ್ಥಿತರಿದ್ದರು.

ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ ಸ್ವಾಗತಿಸಿದರು, ವಿವೇಕಾನಂದ ಕಾಲೇಜಿನ ಉಪನ್ಯಾಸಕ ಡಾ.ಎಚ್.ಜಿ.ಶ್ರೀಧರ್ ಕಾರ್ಯಕ್ರಮ ನಿರ್ವಹಿಸಿದರು.

ಉದ್ಘಾಟನೆ:
ಕಾರ್ಯಕ್ರಮವನ್ನು ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮತ್ತು ಬಾಲವಿಜ್ಞಾನಿ ಅಮನ್ ಕೆ.ಎ. ಅವರನ್ನು ಸನ್ಮಾನಿಸಲಾಯಿತು. ಕಾರಂತರು ಮತ್ತು ಪರಿಸರ ವಿಚಾರ ಗೋಷ್ಠಿಯಲ್ಲಿ ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ಕಾರಂತರನ್ನು ತೆರೆದಿಟ್ಟರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

38 minutes ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago