ಸುಳ್ಯ: ಸೆ. 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಮಿಕರ ಬ್ರಹತ್ ಪ್ರತಿಭಟನೆಯಲ್ಲಿ ಸುಳ್ಯದಿಂದಲೂ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಸಿಐಟಿಯು ಮುಖಂಡರು ತಿಳಿಸಿದ್ದಾರೆ. ಕೇಂದ್ರ ಸರಕಾರ ರದ್ದು ಮಾಡಿರುವ 44 ಕಾರ್ಮಿಕ ಪರವಾದ ಕಾನೂನುಗಳನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.
ಕಟ್ಟಡ ನಿರ್ಮಾಣವಲಯದಲ್ಲಿನ ಉದ್ಯೋಗ ಸೃಷ್ಠಿಯು ತೀರಾ ಕುಸಿದಿದ್ದು ಕಾರ್ಮಿಕರು ಒಪ್ಪೊತ್ತಿನ ಅನ್ನಕ್ಕೂ ಕಷ್ಟಪಡುತ್ತಿದ್ದಾರೆ. ನಾಳೆಯ ದುಡಿಮೆಯನ್ನು ನಂಬಿಕೊಂಡು ವಿವಿಧ ಹಣಕಾಸು ಸಂಸ್ಥೆಗಳಿಂದ ಮಾಡಿದ ಸಾಲ ಅವರ ಜೀವದ ಮೇಲೇಯೇ ತೂಗುಗತ್ತಿಯಂತೆ ನೇತಾಡುತ್ತಿದೆ. ಇಂಜಿನಿಯರಿಂಗ್ ಆದ ಲಕ್ಷಾಂತರ ಯುವಕರು ಇವತ್ತು ಭವಿಷ್ಯದ ದಾರಿ ಕಾಣದೆ ಸಂಕಷ್ಟದಲ್ಲಿದ್ದಾರೆ. ಅವರಿಗೆ ಉದ್ಯೋಗ ಸಿಕ್ಕಿ ಮಕ್ಕಳ ಮತ್ತು ತಮ್ಮ ಭವಿಷ್ಯದ ಕನಸು ಕಾಣುತ್ತಿದ್ದ ಹೆತ್ತವರಿಗೆ ಕೇಂದ್ರ ಸರಕಾರದ ಆರ್ಥಿಕ ನೀತಿ ಬರಸಿಡಿಲಿನಂತೆ ಬಂದೆರಗಿದೆ. ಆದ್ದರಿಂದ ದೇಶದಲ್ಲಿ ಅತೀಹೆಚ್ಚು ಉದ್ಯೋಗ ಸ್ರಷ್ಟಿಸಲ್ಪಡುವ ನಿರ್ಮಾಣವಲಯದ ಉತ್ತೇಜನಕ್ಕೆ ಮತ್ತು ಕಾರ್ಮಿಕರ ಬದುಕನ್ನು ರಕ್ಷಿಸಲು ಒತ್ತಾಯಿಸಿ ಬೆಂಗಳೂರಿನ ಸಿಟಿ ರೈಲ್ವೇ ನಿಲ್ದಾಣದಿಂದ ಮೆರವಣಿಗೆ ಸಾಗಿ ಫ್ರೀಡಂ ಪಾರ್ಕಿನಲ್ಲಿ ಬಹಿರಂಗ ಸಭೆ ನಡೆಯಲಿದೆ. ಈ ಪ್ರತಿಭಟನಾ ಪ್ರದರ್ಶನಕ್ಕೆ ಸಿಐಟಿಯು ವಿನೊಂದಿಗೆ ದೇಶದ ಉಳಿದ ಕಾರ್ಮಿಕ ಪರ ಟ್ರೇಡ್ ಯೂನಿಯನ್ ಗಳಾದ ಇಂಟೆಕ್ ,ಎಐಟಿಯೂಸಿ, ಎನ್.ಸಿ.ಎಲ್. ಹೆಚ್.ಎಂ.ಎಸ್ ಕೂಡಾ ಸಹಕಾರ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…