ಸುಳ್ಯ: ಕಟ್ಟಡ ಕಾರ್ಮಿಕರ ಪರವಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ, ಮಂಡಳಿಯನ್ನು ಪಾರದರ್ಶಕವಾಗಿ ಮುನ್ನಡೆಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ಅವರನ್ನು ಮರು ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು) ಸುಳ್ಯ ತಾಲೂಕು ಸಮಿತಿ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಂಘನೆಯ ಸುಳ್ಯ ತಾಲೂಕು ಅಧ್ಯಕ್ಷ ಕೆ.ಪಿ.ಜಾನಿ ಕಲ್ಲುಗುಂಡಿ ಕಟ್ಟಡ ಕಾರ್ಮಿಕರ ಶ್ರೇಯಾಭಿವೃದ್ಧಿಗೆ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹಗೊಂಡ ಹಣವನ್ನು ಕಟ್ಟಡ ಕಾರ್ಮಿಕರ ಅಗತ್ಯತೆಗಳಿಗಲ್ಲದೆ ಬೇರೆ ಯಾವುದೇ ವಿಚಾರಗಳಿಗೆ ಬಳಕೆ ಮಾಡಬಾರದು ತಪ್ಪಿದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಹೆಚ್. ಕೆ. ನಾಗರಾಜ್, ಕಾರ್ಮಿಕ ಮುಖಂಡರಾದ ಬಿಜು ಅಗಸ್ಟಿನ್, ಪುಟ್ಟಣ್ಣ. ಕೆ, ವಿ. ಗಣೇಶ್, ವಿ. ಆರ್. ಪ್ರಸಾದ್, ಮೋನಪ್ಪ, ನಾಗರಾಜ್ ಕಲ್ಲುಮುಟ್ಲು ಉಪಸ್ಥಿತರಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.