ಕಾಲೇಜ್ ಗಳ ವಿರುದ್ದ ಕ್ರಮಕ್ಕೆ ಎನ್‌ ಎಸ್‌ ಯುಐ ವತಿಯಿಂದ ಮನವಿ

July 28, 2020
11:49 AM

ಸುಳ್ಯ: ಕೊರೊನದಿಂದ ಜನಸಾಮಾನ್ಯರು ಆರ್ಥಿಕವಾಗಿ ಕಂಗೆಟ್ಟಿರುವ ಈ ಸಂದರ್ಭದಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಪೂರ್ಣ ಪ್ರಮಾಣದ ಫೀಸು ಜುಲೈ 31 ರ ಒಳಗಾಗಿ ಕಟ್ಟಬೇಕೆಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುತ್ತೋಲೆ ಹೊರಡಿಸಿದೆ.

Advertisement

ಈ ವರ್ಷ ಹೆಚ್ಚಿನ ವಿದ್ಯಾರ್ಥಿಗಳಿಗೆ ಯಾವುದೇ ಸ್ಕಾಲರ್ಶಿಪ್ ಅಥವಾ ಅರಿವು ಲೋನ್ ಬಂದಿಲ್ಲ, ಅದರೊಂದಿಗೆ ಹೆತ್ತವರಿಗೆ ಉದ್ಯೋಗವೂ ಇಲ್ಲ. ಕಾಲೇಜು ವಿದ್ಯಾರ್ಥಿಗಳ ಹಾಗೂ ಪೋಷಕರ ಸಮಸ್ಯೆಯನ್ನು ಅರ್ಥಮಾಡಿಕೊಂಡು ಫೀಸ್ ಕಟ್ಟಲು ಈಗಾಗಲೇ ಹೊರಡಿಸಿರುವ ದಿನಾಂಕವನ್ನು ಮುಂದೂಡಬೇಕು ಮತ್ತು ಸೂಕ್ತ ಸಮಯಾಕಾಶವನ್ನು ನೀಡಬೇಕೆಂದು ಎನ್‌ ಎಸ್‌ ಯುಐ ಸುಳ್ಯ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಆಶೀಕ್ ಅರಂತೋಡು ರವರ ನೇತೃತ್ವದಲ್ಲಿ ಸಹಾಯಕ ಕಮಿಷನರ್ ಯತೀಶ್ ಉಳ್ಳಾಳ್, ತಹಶೀಲ್ದಾರ್ ಅನಂತಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ, ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕರು ಅಂಗಾರ, ಜಿಲ್ಲಾ ಪಂಚಾಯಿತಿ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕರವರಿಗೆ ಎನ್‌ ಎಸ್‌ ಯುಐ ವತಿಯಿಂದ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ,ಎನ್‌ ಎಸ್‌ ಯುಐ ಉಪಾಧ್ಯಕ್ಷ ಕೀರ್ತನ್ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶಾಝಿಲ್, ಅಫ್ನಾನ್ ಅರಂಬೂರ್ ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ
ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌
August 3, 2025
9:00 AM
by: ದ ರೂರಲ್ ಮಿರರ್.ಕಾಂ
ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ
August 3, 2025
8:00 AM
by: ದ ರೂರಲ್ ಮಿರರ್.ಕಾಂ
ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ
August 2, 2025
9:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group