ಸುಳ್ಯ: ಕೊರೊನದಿಂದ ಜನಸಾಮಾನ್ಯರು ಆರ್ಥಿಕವಾಗಿ ಕಂಗೆಟ್ಟಿರುವ ಈ ಸಂದರ್ಭದಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಪೂರ್ಣ ಪ್ರಮಾಣದ ಫೀಸು ಜುಲೈ 31 ರ ಒಳಗಾಗಿ ಕಟ್ಟಬೇಕೆಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುತ್ತೋಲೆ ಹೊರಡಿಸಿದೆ.
ಈ ವರ್ಷ ಹೆಚ್ಚಿನ ವಿದ್ಯಾರ್ಥಿಗಳಿಗೆ ಯಾವುದೇ ಸ್ಕಾಲರ್ಶಿಪ್ ಅಥವಾ ಅರಿವು ಲೋನ್ ಬಂದಿಲ್ಲ, ಅದರೊಂದಿಗೆ ಹೆತ್ತವರಿಗೆ ಉದ್ಯೋಗವೂ ಇಲ್ಲ. ಕಾಲೇಜು ವಿದ್ಯಾರ್ಥಿಗಳ ಹಾಗೂ ಪೋಷಕರ ಸಮಸ್ಯೆಯನ್ನು ಅರ್ಥಮಾಡಿಕೊಂಡು ಫೀಸ್ ಕಟ್ಟಲು ಈಗಾಗಲೇ ಹೊರಡಿಸಿರುವ ದಿನಾಂಕವನ್ನು ಮುಂದೂಡಬೇಕು ಮತ್ತು ಸೂಕ್ತ ಸಮಯಾಕಾಶವನ್ನು ನೀಡಬೇಕೆಂದು ಎನ್ ಎಸ್ ಯುಐ ಸುಳ್ಯ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಆಶೀಕ್ ಅರಂತೋಡು ರವರ ನೇತೃತ್ವದಲ್ಲಿ ಸಹಾಯಕ ಕಮಿಷನರ್ ಯತೀಶ್ ಉಳ್ಳಾಳ್, ತಹಶೀಲ್ದಾರ್ ಅನಂತಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ, ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕರು ಅಂಗಾರ, ಜಿಲ್ಲಾ ಪಂಚಾಯಿತಿ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕರವರಿಗೆ ಎನ್ ಎಸ್ ಯುಐ ವತಿಯಿಂದ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ,ಎನ್ ಎಸ್ ಯುಐ ಉಪಾಧ್ಯಕ್ಷ ಕೀರ್ತನ್ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶಾಝಿಲ್, ಅಫ್ನಾನ್ ಅರಂಬೂರ್ ಉಪಸ್ಥಿತರಿದ್ದರು.
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…