ಸುಳ್ಯ: ಕೊರೊನದಿಂದ ಜನಸಾಮಾನ್ಯರು ಆರ್ಥಿಕವಾಗಿ ಕಂಗೆಟ್ಟಿರುವ ಈ ಸಂದರ್ಭದಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಪೂರ್ಣ ಪ್ರಮಾಣದ ಫೀಸು ಜುಲೈ 31 ರ ಒಳಗಾಗಿ ಕಟ್ಟಬೇಕೆಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುತ್ತೋಲೆ ಹೊರಡಿಸಿದೆ.
ಈ ವರ್ಷ ಹೆಚ್ಚಿನ ವಿದ್ಯಾರ್ಥಿಗಳಿಗೆ ಯಾವುದೇ ಸ್ಕಾಲರ್ಶಿಪ್ ಅಥವಾ ಅರಿವು ಲೋನ್ ಬಂದಿಲ್ಲ, ಅದರೊಂದಿಗೆ ಹೆತ್ತವರಿಗೆ ಉದ್ಯೋಗವೂ ಇಲ್ಲ. ಕಾಲೇಜು ವಿದ್ಯಾರ್ಥಿಗಳ ಹಾಗೂ ಪೋಷಕರ ಸಮಸ್ಯೆಯನ್ನು ಅರ್ಥಮಾಡಿಕೊಂಡು ಫೀಸ್ ಕಟ್ಟಲು ಈಗಾಗಲೇ ಹೊರಡಿಸಿರುವ ದಿನಾಂಕವನ್ನು ಮುಂದೂಡಬೇಕು ಮತ್ತು ಸೂಕ್ತ ಸಮಯಾಕಾಶವನ್ನು ನೀಡಬೇಕೆಂದು ಎನ್ ಎಸ್ ಯುಐ ಸುಳ್ಯ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಆಶೀಕ್ ಅರಂತೋಡು ರವರ ನೇತೃತ್ವದಲ್ಲಿ ಸಹಾಯಕ ಕಮಿಷನರ್ ಯತೀಶ್ ಉಳ್ಳಾಳ್, ತಹಶೀಲ್ದಾರ್ ಅನಂತಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ, ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕರು ಅಂಗಾರ, ಜಿಲ್ಲಾ ಪಂಚಾಯಿತಿ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕರವರಿಗೆ ಎನ್ ಎಸ್ ಯುಐ ವತಿಯಿಂದ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ,ಎನ್ ಎಸ್ ಯುಐ ಉಪಾಧ್ಯಕ್ಷ ಕೀರ್ತನ್ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶಾಝಿಲ್, ಅಫ್ನಾನ್ ಅರಂಬೂರ್ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…