ಪುತ್ತೂರು: ಪೆರ್ಲಂಪಾಡಿ ಕಡೆ ಹೋಗುತ್ತಿದ್ದ ಓಮ್ನಿಗೆ ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಫೆ.23ರಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು, ಓರ್ವರು ಮೃತಪಟ್ಟಿದ್ದಾರೆ.
ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾರುತಿ ಓಮ್ನಿ ಚಲಾಯಿಸುತ್ತಿದ್ದ ಕೊಡಿಪ್ಪಾಡಿ ನಾರಾಯಣ ಜೋಯಿಷ ಅವರು ಮೃತಪಟ್ಟ ದುರ್ದೈವಿ. ನಾರಾಯಣ ಜೋಯಿಷ ಅವರು ಪೆರ್ಲಂಪಾಡಿ ತರವಾಡು ಮನೆಯಲ್ಲಿ ಕಾರ್ಯಕ್ರಮ ನಿಮಿತ್ತ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ತಕ್ಷಣ ಓಮ್ನಿಯ ಹಿಂದೆ ಕಾರಿನಲ್ಲಿ ಬರುತ್ತಿದ್ದ ನಾರಾಯಣ ಜೋಯಿಷ ಅವರ ಪುತ್ರ, ಸಂಬಂಧಿಕರು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490
ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…