Advertisement
ಸುದ್ದಿಗಳು

ಕಾವೇರಿ ತೀರ್ಥೋದ್ಬವ ಪೂರ್ವಭಾವಿ ಸಭೆ : ತಲಾಕಾವೇರಿ ಕೊಳದಲ್ಲಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿ ಬಳಕೆ ಸಂಪೂರ್ಣ ನಿಷೇಧ

Share

ಮಡಿಕೇರಿ: ಭಾಗಮಂಡಲ, ತಲಕಾವೇರಿ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಮದ್ಯ ಸೇವನೆ ಸಂಪೂರ್ಣ ನಿಷೇಧವಾಗಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಶಾಸಕರಾದ ಕೆ.ಜಿ.ಬೊಪಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ತಲಕಾವೇರಿ ತೀರ್ಥೋದ್ಬವ ಜಾತ್ರೆ ಸಂಬಂಧ ಭಾಗಮಂಡಲದ ಮುಡಿ ಕಟ್ಟಡದಲ್ಲಿ ಶನಿವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಕೆ.ಜಿ.ಬೊಪಯ್ಯ ಅವರು ಕ್ಷೇತ್ರದಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ಯಾವುದೇ ಚ್ಯುತಿ ಬಾರದಂತೆ ನಡೆದು ಕೊಳ್ಳಬೇಕು. ಹಾಗೂ ಇಲ್ಲಿನ ಆಚಾರ ವಿಚಾರಕ್ಕೆ ಬದ್ಧರಾಗಿ ಯಾತ್ರಿಗಳು ನಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ಕಾವೇರಿ ತೀರ್ಥೋದ್ಬವ ಸಂದರ್ಭದಲ್ಲಿ ಕೊಳದಿಂದ ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲಿಗಳಿಂದ ತೀರ್ಥವನ್ನು ಶೇಖರಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಲಾಗಿದ್ದು ಇದನ್ನು ತಪ್ಪದೆ ಪಾಲನೆ ಮಾಡಬೇಕೆಂದು ಶಾಸಕರು ತಿಳಿಸಿದರು.  ತಲಕಾವೇರಿ ಜಾತ್ರೆ ಸಂಬಂಧ ಭಾಗಮಂಡಲ ಗ್ರಾಮ ಪಂಚಾಯತ್ ಗೆ ಸರಕಾರವು  20 ಲಕ್ಷ ರೂ. ಬಿಡುಗಡೆ ಮಾಡಿದ್ದು, ಅಗತ್ಯ ತುರ್ತು ಕಾಮಗಾರಿಗೆ ಆದ್ಯತೆ ನೀಡಿ ಪೂರ್ಣ ಗೊಳಿಸಬೇಕು. ಜೊತೆಗೆ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವಂತೆ ಸೂಚಿಸಿದರು. ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಕಾರ್ಯ ನಿರ್ವಹಿಸಬೇಕೆಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುಲಾ ಸಂಕ್ರಮಣ ತೀರ್ಥೋದ್ಬವ ಕಾರ್ಯಕ್ರಮದ ಆಚಾರ, ವಿಚಾರ, ಶ್ರದ್ಧೆ, ಭಕ್ತಿಗೆ ಯಾವುದೇ ಧಕ್ಕೆ ಬಾರದಂತೆ ನಡೆಯಲು ಎಲ್ಲ್ಲರ ಸಹಕಾರ ಅತ್ಯಗತ್ಯವಾಗಿದ್ದು, ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಶಾಸಕರು ತಿಳಿಸಿದರು.

ಜಾತ್ರೆ ಸಂದರ್ಭದಲ್ಲಿ ಪೊಲೀಸ್ ಇಲಾಖೆಯು ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡು ಸಾರ್ವಜನಿಕರಿಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಈ ಸಂಬಂಧ ಮಾಹಿತಿ ನೀಡಿದ ಮಡಿಕೇರಿ ವಿಭಾಗದ ಡಿವೈಎಸ್‍ಪಿ ದಿನೇಶ್ ಕುಮಾರ್ ಅವರು ಜಾತ್ರೆ ಸಂದರ್ಭದಲ್ಲಿ ಐನೂರು ಜನ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದ್ದು, ಪಾಳಿಯ ಮೇಲೆ ಕರ್ತವ್ಯ ನಿರ್ವಹಿಸಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಭಾಗಮಂಡಲ ಗ್ರಾಮ ಪಂಚಾಯತ್ ಕಸ ವಿಲೇವಾರಿಗೆ ತಣ್ಣಿಮಾಣಿ ಗ್ರಾಮ ವ್ಯಾಪ್ತಿಯಲ್ಲಿ ಈಗಾಗಲೆ ಜಾಗ ಗುರುತಿಸಿದ್ದು, ಅರಣ್ಯ ಇಲಾಖೆ ಇದಕ್ಕೆ ಸಹಕರಿಸದೆ ಇರುವುದಕ್ಕೆ ತೀವ್ರ ಅಸಮದಾನ ವ್ಯಕ್ತಪಡಿಸುತ್ತ, ತಣ್ಣಿಮಾಣಿ ಗ್ರಾಮದಲ್ಲಿ ಕಸವಿಲೆವಾರಿ ಘಟಕ ನಿರ್ಮಾಣಕ್ಕೆ ಸಹಕರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರಾದ ಕೆ.ಜಿ.ಬೊಪಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಭಗಂಡೇಶ್ವರ-ತಲಕಾವೇರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ ಅವರು ಮಾತನಾಡಿ ತೀರ್ಥೋದ್ಬವ ಸಂದರ್ಭದಲ್ಲಿ ವಾಟರ್ ಪ್ರೂಫ್ ಶಾಮಿಯಾನ ಅಳವಡಿಸಲಾಗುವುದು. ಈಗಾಗಲೇ ತಲಕಾವೇರಿ ಭಾಗಮಂಡಲದಲ್ಲಿ ಶಾಶ್ವತ ಸಿ.ಸಿ.ಟಿ.ವಿ ಅಳವಡಿಸಲಾಗಿದ್ದು ಜೊತೆಗೆ ಧ್ವನಿ ವರ್ಧಕ ಅಳವಡಿಲಾಗಿದೆ ಎಂದು ತಿಳಿಸಿದರು.
ತೀರ್ಥೊದ್ಬವ ಸಂದರ್ಭದಲ್ಲಿ ಸ್ವಯಂ ಸೇವಕರು ತೀರ್ಥ ವಿತರಣೆ ಮಾಡಲಿದ್ದು, ಭಕ್ತಾಧಿಗಳು ಸಂಯಮದಿಂದ ವರ್ತಿಸಿ ಕೊಳದಲ್ಲಿ ಯಾವುದೆ ತರನಾದ ಪ್ಲಾಸ್ಟಿಕ್ ಬಿಂದಿಗೆಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಿರುವುದಾಗಿ ತಿಳಿಸಿದರು.

ಭಗಂಡೇಶ್ವರ ದೇವಸ್ಥಾನದ ತಕ್ಕ ಮುಖ್ಯಸ್ಥರಾದ ಮೋಟಯ್ಯ ಅವರು ಮಾತನಾಡಿ ದೇವಸ್ಥಾನದ ಕಟ್ಟುಪಾಡುಗಳನ್ನು ಎಲ್ಲರೂ ಪಾಲಿಸಬೇಕು ಅಕ್ಟೋಬರ್ 15 ಕ್ಕೆ ಅಕ್ಷಯ ಪಾತ್ರೆ, ಭಂಡಾರ ಶಾಸ್ತ್ರ ನಡೆಯುತ್ತದೆ ಎಂದು ತಿಳಿಸುತ್ತ ದೇವತ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ರಾಧಕೃಷ್ಣ ನಾಯಕ್ ಎಂಬುವವರು ಭಗಂಡೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿರುವ ತಮ್ಮ ಎರಡು ಏಕರೆ ಜಾಗವನ್ನು ದೇವಸ್ಥಾನಕ್ಕೆ ದಾನವಾಗಿ ನೀಡಿರುವ ಬಗ್ಗೆ ಶಾಸಕರಾದ ಕೆ.ಜಿ.ಬೊಪಯ್ಯ ತಿಳಿಸಿದರು.

ಸಭೆಯಲ್ಲಿ ಗ್ರಾಮಸ್ಥರು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಲವು ಸಲಹೆ ಸೂಚನೆ ನೀಡಿ, ಭಾಗಮಂಡಲ-ತಲಕಾವೇರಿ ವ್ಯಾಪ್ತಿಯಲ್ಲಿ ಆಗಬೇಕಾಗಿರುವ ಶಾಶ್ವತ ಕಾಮಗಾರಿಗಳ ಕುರಿತು ಮಾಹಿತಿ ಅಂಚಿಕೊಂಡರು. ಸಭೆಗೂ ಮೊದಲು ಶಾಸಕರಾದ ಕೆ.ಜಿ.ಬೊಪಯ್ಯ ಅವರು 58 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದರು.

ಸಭೆಯಲ್ಲಿ ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಜಿ.ಪಂ.ಸದಸ್ಯರಾದ ಕವಿತ ಪ್ರಭಾಕರ್, ಮಡಿಕೇರಿ ತಾ.ಪಂ.ಅಧ್ಯಕ್ಷರಾದ ಶೋಭ ಮೋಹನ್, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರು, ಜಿ.ಪಂ.ಉಪ ಕಾರ್ಯದರ್ಶಿ ಗೂಡೂರು ಭೀಮಸೇನ, ಉಪ ವಿಭಾಗಧಿಕಾರಿ ಟಿ.ಜವರೇಗೌಡ, ಮಡಿಕೇರಿ ತಹಶೀಲ್ದಾರ್ ಮಹೇಶ್ ತಾ.ಪಂ.ಇಒ ಲಕ್ಷ್ಮಿ, ಪ್ರಮುಖರಾದ ಮನುಮುತ್ತಪ್ಪ, ಎಂ.ಬಿ.ದೇವಯ್ಯ, ನಾರಾಯಣಚಾರ್ ಅವರು ಹಲವು ವಿಚಾರಗಳ ಕುರಿತು ಮಾತನಾಡಿದರು. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇತರರು ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

38 minutes ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

12 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

12 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago