ಕಿದು ತೆಂಗು ಸಂಶೋಧನಾ ಕೇಂದ್ರಕ್ಕೆ ಸುಬ್ರಹ್ಮಣ್ಯ ಶ್ರೀ ಭೇಟಿ

June 28, 2019
10:17 PM

ಸುಬ್ರಹ್ಮಣ್ಯ: ಕಿದುವಿನ ಅಂತರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರ ಉಳಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಇಚ್ಚಾಶಕ್ತಿ ವ್ಯಕ್ತಪಡಿಸಬೇಕು ಎಂದು ಸುಬ್ರಹ್ಮಣ್ಯ   ಸಂಪುಟ ನರಸಿಂಹ ಶ್ರೀ ಸುಬ್ರಹ್ಮಣ್ಯ  ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.

ಅವರು ಕಡಬ ತಾಲೂಕಿನ ಬಿಳಿನೆಲೆ ಕಿದು ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಶುಕ್ರವಾರ ಸಂಜೆ ತೆರಳಿ ತೋಟಗಳ ಬೆಳೆಗಳ ವೀಕ್ಷಣೆ ನಡೆಸಿದರು. ಸಂಶೋಧನಾ ಕೇಂದ್ರ ಉಳಿಸುವ ಮೂಲಕ ಕೃಷಿಕರ ಹಿತ ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರಕಾರಗಳ ಪಾತ್ರ ಸಮಾನದ್ದಾಗಿದೆ. ರಾಜ್ಯದ ಎಲ್ಲಾ ಸಂಸದರು,  ಶಾಸಕರಿಂದ ಹಿಡಿದು ಮುಖ್ಯಮಂತ್ರಿಗಳ ತನಕ ಈ ರಿಸರ್ಚ್ ಸೆಂಟರ್ ರಾಜ್ಯದಲ್ಲಿ ಉಳಿಸುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು.  ಕಿದು ಕೇಂದ್ರ ಉಳಿಸಲು ಸಂಬಂಧ ಕೇಂದ್ರ ಹಾಗೂ ರಾಜ್ಯದ ಸಚಿವರು, ಸಂಸದರು, ಶಾಸಕರುಗಳನ್ನು ಭೇಟಿಯಾಗಿ ಒತ್ತಾಯಿಸಲಾಗುವುದು ಎಂದರು.
ಈ ಸಂದರ್ಭ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ,  ಬಿಳಿನೆಲೆ ಸಹಕಾರಿ ಸಂಘದ ಅರ್ಧಯಕ್ಷ ಬಾಲಕೃಷ್ಣ ವಾಲ್ತಾಜೆ, ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದಾದಿನೇಶ್ ಗ್ರಾ.ಪಂ ಸದಸ್ಯ ಸತೀಶ್ ಕಳಿಗೆ, ಕೃಷಿಕ ಗಣಪಯ್ಯ ಗೌಡ ಪುತ್ತಿಲ, ಕೇಂದ್ರದ ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು
March 12, 2026
7:11 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror