ಸುಬ್ರಹ್ಮಣ್ಯ: ಕಿದುವಿನ ಅಂತರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರ ಉಳಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಇಚ್ಚಾಶಕ್ತಿ ವ್ಯಕ್ತಪಡಿಸಬೇಕು ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಹೇಳಿದರು.
ಅವರು ಕಡಬ ತಾಲೂಕಿನ ಬಿಳಿನೆಲೆ ಕಿದು ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಶುಕ್ರವಾರ ಸಂಜೆ ತೆರಳಿ ತೋಟಗಳ ಬೆಳೆಗಳ ವೀಕ್ಷಣೆ ನಡೆಸಿದರು. ಸಂಶೋಧನಾ ಕೇಂದ್ರ ಉಳಿಸುವ ಮೂಲಕ ಕೃಷಿಕರ ಹಿತ ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರಕಾರಗಳ ಪಾತ್ರ ಸಮಾನದ್ದಾಗಿದೆ. ರಾಜ್ಯದ ಎಲ್ಲಾ ಸಂಸದರು, ಶಾಸಕರಿಂದ ಹಿಡಿದು ಮುಖ್ಯಮಂತ್ರಿಗಳ ತನಕ ಈ ರಿಸರ್ಚ್ ಸೆಂಟರ್ ರಾಜ್ಯದಲ್ಲಿ ಉಳಿಸುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು. ಕಿದು ಕೇಂದ್ರ ಉಳಿಸಲು ಸಂಬಂಧ ಕೇಂದ್ರ ಹಾಗೂ ರಾಜ್ಯದ ಸಚಿವರು, ಸಂಸದರು, ಶಾಸಕರುಗಳನ್ನು ಭೇಟಿಯಾಗಿ ಒತ್ತಾಯಿಸಲಾಗುವುದು ಎಂದರು.
ಈ ಸಂದರ್ಭ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ , ಬಿಳಿನೆಲೆ ಸಹಕಾರಿ ಸಂಘದ ಅರ್ಧಯಕ್ಷ ಬಾಲಕೃಷ್ಣ ವಾಲ್ತಾಜೆ, ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದಾದಿನೇಶ್ ಗ್ರಾ.ಪಂ ಸದಸ್ಯ ಸತೀಶ್ ಕಳಿಗೆ, ಕೃಷಿಕ ಗಣಪಯ್ಯ ಗೌಡ ಪುತ್ತಿಲ, ಕೇಂದ್ರದ ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…