ಪುತ್ತೂರು: ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ನಿಧಿ ಸಂಚಯನ ಮತ್ತು ಮುಂದಿನ ಕೆಲಸ ಕಾರ್ಯಗಳ ಬಗ್ಗೆ ನಡೆದ ಸಮಾಲೋಚನಾ ಸಭೆ ಪುತ್ತೂರು ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಾಧ್ಯಕ್ಷ ನಲ್ಕ ಗೋಪಾಲಕೃಷ್ಣ ಆಚಾರ್, ಯೋಜನೆಗೆ ತಕ್ಕ ಹಾಗೆ ದೇವಸ್ಥಾನ ರೂಪಿಸುವ ಸಂದರ್ಭದಲ್ಲಿ ಈ ರೀತಿಯಲ್ಲಿ ಸಮಾಜದ ಪ್ರಮುಖರ ಸಮಾಲೋಚನೆ ಸಭೆಗಳು ಅಲ್ಲಲ್ಲಿ ನಡೆಯಬೇಕಾಗಿದೆ ಎಂದರು.
ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಬಾಲಕೃಷ್ಣ ಆಚಾರ್ಯ ಮರೋಳಿ ಮಾತನಾಡಿದರು.
ದ.ಕ.ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಅಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು , ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಧನಂಜಯ ಆಚಾರ್ಯ ಏನೆಕಲ್ಲು , ಗುರು ಸೇವಾ ಪರಿಷತ್ ಪುತ್ತೂರು ವಲಯ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ಕೊಕ್ಕಡ , ಪುತ್ತೂರು ವಿಶ್ವಬ್ರಾಹ್ಮಣ ಸೇವಾ ಸಂಘದ ಕಾರ್ಯದರ್ಶಿ ಶ್ರೀಧರ ಆಚಾರ್ಯ ಕೊಕ್ಕಡ , ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಾಧ್ಯಕ್ಷ ಉದಯಕುಮಾರ್ ಆಚಾರ್ಯ, ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಕಾರ್ಯಾಧ್ಯಕ್ಷೆ ಪ್ರಭಾಹರೀಶ್ ಆಚಾರ್ಯ ಮಾತನಾಡಿದರು.
ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ ಇಳಂತಿಲ, ಪುತ್ತೂರು ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಸುರೇಶ್ ಆಚಾರ್ಯ ಕಾಣಿಯೂರು, ಪುತ್ತೂರು ವಿಶ್ವಕರ್ಮ ಯುವ ಮಿಲನದ ಅಧ್ಯಕ್ಷ ವಸಂತ ಆಚಾರ್ಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಪಾಲ್ತಾಡಿ, ಪುತ್ತೂರು ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷೆ ವಾಣಿ ನವೀನ್ ಆಚಾರ್ಯ, ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಸಲಹೆಗಾರ ಪ್ರಭಾಕರ ಆಚಾರ್ಯ, ಪ್ರಧಾನಕಾರ್ಯದರ್ಶಿ ಸಂಜೀವ ಆಚಾರ್ಯ, ವಿಶ್ವಕರ್ಮ ಮಹಿಳಾ ಮಂಡಳಿಯ ಸ್ಥಾಪಕಾಧ್ಯಕ್ಷೆ ಉಷಾಸದಾನಂದ ಆಚಾರ್ಯ ಸಲಹೆ ಸೂಚನೆ ನೀಡಿದರು.
ಬಾಲಕೃಷ್ಣ ಪುರೋಹಿತ್ ಕುಕ್ಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ ವಂದಿಸಿದರು.
ಅಡಿಕೆಯ ಮೇಲೆ ಕ್ಯಾನ್ಸರ್ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…
ಎಲ್ಲಾ ಪಡಿತರ ಕಾರ್ಡ್ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…