ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭೇಟಿ ನೀಡಿ ಸಿದ್ಧತಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ದೇವಸ್ಥಾನದಲ್ಲಿ ರಂಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಿದ್ಧತೆಗಳ ಮಾಹಿತಿ ಪಡೆದು ಸೂಕ್ತ ನಿರ್ದೇಶನಗಳನ್ನು ನೀಡಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಚಂಪಾ ಷಷ್ಠಿ ಮಹೋತ್ಸವದ ಯಶಸ್ಸಿಗೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಪೊಲೀಸ್ ಭದ್ರತೆ ಹಾಗೂ ಭದ್ರತೆ ದೃಷ್ಟಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ, ಕಳೆದ ಬಾರಿಗಿಂತ ಈ ಬಾರಿ 200 ಪೊಲೀಸರನ್ನು ಹೆಚ್ಚುವರಿಯಾಗಿ ನಿಯೋಜನೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು. ಇದುವರೆಗೆ 70 ಜನ ಬ್ರಹ್ಮರಥ ಸೇವಾರ್ಥಿಗಳು ಇದ್ದಾರೆ ಎಂದು ಮಾಹಿತಿ ನೀಡಿದರು.
ಪಾರ್ಕಿಂಗ್ ವ್ಯವಸ್ಥೆ:
ಜಾತ್ರಾ ಉತ್ಸವಕ್ಕೆ ವಾಹನಗಳ ಸೂಕ್ತ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದ್ದು ಸರಕಾರಿ ಬಸ್ ಗಳಿಗೆ ಕುಮಾರಧಾರ ಮತ್ತು ಇಂಜಾಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಉಚಿತವಾಗಿ ಮಿನಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.ಇತರ ವಾಹನಗಳಿಗೆ ಅಲ್ಲಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಸಂದರ್ಭ ದೇವಸ್ಥಾನದ ಆಡಳಿತಾಧಿಕಾರ, ಅಪರ ಜಿಲ್ಲಾಧಿಕಾರಿ ರೂಪಾ, ಕಾರ್ಯ ನಿರ್ವಹಣಾಧಿಕಾರಿಯಾಗಿ, ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ , ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು ಉಪಸ್ಥಿತರಿದ್ದರು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…