ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೂವು ಸರಬರಾಜು ಮಾಡಲು ಟೆಂಡರ್ ಕರೆಯಲಾಗಿದೆ. ಇದರಲ್ಲಿ ಬಿಲ್ವಪತ್ರೆ ರಹಿತವಾಗಿದೆ. ಹೀಗಾಗಿ ಈ ಟೆಂಡರ್ ರದ್ದು ಮಾಡಿ ಹೊಸದಾದ ಟೆಂಡರ್ ಕರೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ , ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತ ಶಶಿಧರ್ ವಿ ಎನ್ ಎಂಬವರು ಹಿಂದೂ ಧಾರ್ಮಿಕ ಸಂಸ್ಥೆಗಳ ಆಯುಕ್ತರಿಗೆ ದೂರು ನೀಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2020-21 ನೇ ಸಾಲಿನಲ್ಲಿ ದೇವಸ್ಥಾನಕ್ಕೆ ಅವಶ್ಯ ಹೂವು ಸರಬರಾಜು ಮಾಡಲು ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ನಲ್ಲಿ 16 ಹೂವುಗಳ ಆವಶ್ಯಕತೆಯ ಬಗ್ಗೆ ಇದ್ದರೆ ಬಿಲ್ವ ಪತ್ರೆಯ ಅವಶ್ಯಕತೆಯ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತ ಶಶಿಧರ್ ವಿ ಎನ್ ಆಯುಕ್ತರಿಗೆ ದೂರು ನೀಡಿದ್ದು ಶೈವ ದೇವಸ್ಥಾನದಲ್ಲಿ ಬಿಲ್ವ ಪತ್ರೆಯ ಅವಶ್ಯಕತೆ ಏಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವರ ಸಹಿತ ಉಮಾಮಹೇಶ್ವರ ದೇವರ ಆರಾಧನೆ ನಡೆಯುತ್ತದೆ. ಶಿವ ದೇವರಿಗೆ ಬಿಲ್ವಪತ್ರೆ ಅಗತ್ಯವಾಗಿದೆ. ಹೀಗಾಗಿ ಈ ಟೆಂಡರ್ ನಲ್ಲಿ ಬಿಲ್ವಪತ್ರೆ ಅವಶ್ಯಕತೆ ಬಗ್ಗೆ ಮಾಹಿತಿ ಇಲ್ಲ. ಆದ್ದರಿಂದ ದೇವಸ್ಥಾನದಲ್ಲಿ ಬಿಲ್ವಪತ್ರೆ ಸಹಿತವಾದ ಪೂಜೆ ನಡೆಯಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…