Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಲ್ವ ಪತ್ರೆ ಬೇಡ…!

Share

ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೂವು ಸರಬರಾಜು ಮಾಡಲು ಟೆಂಡರ್ ಕರೆಯಲಾಗಿದೆ. ಇದರಲ್ಲಿ  ಬಿಲ್ವಪತ್ರೆ ರಹಿತವಾಗಿದೆ.  ಹೀಗಾಗಿ ಈ ಟೆಂಡರ್ ರದ್ದು ಮಾಡಿ ಹೊಸದಾದ ಟೆಂಡರ್ ಕರೆಯಬೇಕು ಎಂದು  ಸಾಮಾಜಿಕ ಕಾರ್ಯಕರ್ತ , ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತ ಶಶಿಧರ್ ವಿ ಎನ್ ಎಂಬವರು ಹಿಂದೂ ಧಾರ್ಮಿಕ ಸಂಸ್ಥೆಗಳ ಆಯುಕ್ತರಿಗೆ ದೂರು ನೀಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2020-21 ನೇ ಸಾಲಿನಲ್ಲಿ  ದೇವಸ್ಥಾನಕ್ಕೆ ಅವಶ್ಯ ಹೂವು ಸರಬರಾಜು ಮಾಡಲು ಟೆಂಡರ್ ಕರೆಯಲಾಗಿತ್ತು.  ಈ ಟೆಂಡರ್ ನಲ್ಲಿ 16 ಹೂವುಗಳ ಆವಶ್ಯಕತೆಯ ಬಗ್ಗೆ ಇದ್ದರೆ ಬಿಲ್ವ ಪತ್ರೆಯ ಅವಶ್ಯಕತೆಯ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತ ಶಶಿಧರ್ ವಿ ಎನ್  ಆಯುಕ್ತರಿಗೆ ದೂರು ನೀಡಿದ್ದು ಶೈವ ದೇವಸ್ಥಾನದಲ್ಲಿ  ಬಿಲ್ವ ಪತ್ರೆಯ ಅವಶ್ಯಕತೆ ಏಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವರ ಸಹಿತ  ಉಮಾಮಹೇಶ್ವರ ದೇವರ ಆರಾಧನೆ ನಡೆಯುತ್ತದೆ. ಶಿವ ದೇವರಿಗೆ ಬಿಲ್ವಪತ್ರೆ ಅಗತ್ಯವಾಗಿದೆ. ಹೀಗಾಗಿ ಈ ಟೆಂಡರ್ ನಲ್ಲಿ  ಬಿಲ್ವಪತ್ರೆ ಅವಶ್ಯಕತೆ ಬಗ್ಗೆ ಮಾಹಿತಿ ಇಲ್ಲ. ಆದ್ದರಿಂದ ದೇವಸ್ಥಾನದಲ್ಲಿ ಬಿಲ್ವಪತ್ರೆ ಸಹಿತವಾದ ಪೂಜೆ ನಡೆಯಬೇಕು ಎಂದು ಅವರು ದೂರಿನಲ್ಲಿ  ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

16 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago