ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಶ್ರೀ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವನ್ನು ಪೂರ್ವ ಶಿಷ್ಟ ಸಂಪ್ರದಾಯದಂತೆ ಆಚರಿಸಲಾಯಿತು.
ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಬಿರುದಾವಳಿ,ಮಂಗಳವಾದ್ಯದ ಮೂಲಕ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತಂದರು. ಶ್ರೀದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು. ಬಳಿಕ ರಥಬೀದಿಯಿಂದ ಕಾಶಿಕಟ್ಟೆ ತನಕ ಶ್ರೀ ದೇವರ ಉತ್ಸವದ ಸಂದರ್ಭದಲ್ಲಿ ಅಲ್ಲಲ್ಲಿ ಕಂಬದಲ್ಲಿ ಕಟ್ಟಿದ್ದ ಮೊಸರು ತುಂಬಿದ ಕುಡಿಕೆಗಳನ್ನು ಮಹಿಳೆಯರು ಒಡೆದು ಜನ್ಮಾಷ್ಠಮಿಯನ್ನು ಆಚರಿಸಿದರು.ಅಂತಿಮವಾಗಿ ಕಾಶಿಕಟ್ಟೆಯಲ್ಲಿ ಇರಿಸಿದ್ದ ಮೊಸರಿನ ಗಡಿಗೆಗಳನ್ನು ಒಡೆಯಲಾಯಿತು. ನಂತರ ಕಾಶಿಕಟ್ಟೆಯಲ್ಲಿ ಭಗವಾನ್ ಶ್ರೀಕೃಷ್ಣನಿಗೆ ಮಹಾಪೂಜೆ ನೆರವೇರಿತು.
ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಪೇಟ್ಲೆ ಬೆಡಿ ಅತ್ಯಂತ ಪ್ರಮುಖವಾದುದ್ದಾಗಿದೆ. ಸುಬ್ರಹ್ಮಣ್ಯದಲ್ಲಿ ನಡೆದ ಉತ್ಸವದಲ್ಲಿ ಹಿರಿಯರು ಕಿರಿಯರೆನ್ನದೆ ಪೇಟ್ಲೆ ಬೆಡಿಯ ಆಟವಾಡಿ ರಂಜಿಸಿದರು. ಮಕ್ಕಳು ಮತ್ತು ಹಿರಿಯರು ಪೇಟ್ಲೆ ಬೆಡಿಯನ್ನು ಬಿಟ್ಟು ಸಂಭ್ರಮಿಸಿದರು. ಕಾವಟೆಮರದ ಗೆಲ್ಲುಗಳಿಂದ ತಯಾರಿಸಿದ ಪೇಟ್ಲೆ ಬೆಡಿಯನ್ನು ಪ್ರಾಚೀನತೆಯ ಸಂಕೇತವಾಗಿ ಒಡೆದರು.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …