ಸುಬ್ರಹ್ಮಣ್ಯ : ವಇಂದಿನ ಮಕ್ಕಳು ದೇಶದ ಭವಿಷ್ಯದ ನಾಯಕರಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಸಂಸತ್ ಪ್ರಯೋಜನಕಾರಿ. ಆಡಳಿತ ಪಕ್ಷದ ಜವಾಬ್ದಾರಿ ಮತ್ತು ವಿರೋಧ ಪಕ್ಷದ ಕರ್ತವ್ಯದ ಪ್ರಜ್ಞೆ ವಿದ್ಯಾರ್ಥಿಗಳು ಅರಿಯಬೇಕಿದೆ ಎಂದು ಯುವ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಹೇಳಿದರು.
ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ನಡೆದ ನೂತನ ವಿದ್ಯಾರ್ಥಿ ಸರಕಾರದ ಉದ್ಘಾಟನೆ, ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಪಾಲ್ಗೊಂಡು ಮಾತನಾಡಿದರು.
ಮುಖ್ಯ ಶಿಕ್ಷಕಿ ವಿದ್ಯಾರತ್ನ ಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಚಂದ್ರಶೇಖರ್ ನಾಯರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸುಮಂತ್ ರೈ ಸ್ವಾಗತಿಸಿ, ಕೃತಿ ಎಂ.ಜಿ ವಂದಿಸಿದರು. ಸ್ಮೃ ತಿ ಜಿ.ಕೆ. ಕಾರ್ಯಕ್ರಮ ನಿರೂಪಿಸಿದರು.
ಮುಖ್ಯ ಮಂತ್ರಿಯಾಗಿ ಪ್ರಾರ್ಥನ್ ಎಸ್ ಜಿ , ಉಪ ಮುಖ್ಯಮಂತ್ರಿಯಾಗಿ ಅಧಿತಿ ಕೆ ಕೆ ಹಾಗೂ ವಿವಿಧ ಖಾತೆಯ ಮಂತ್ರಿಗಳಾಗಿ ಪ್ರಥಮೇಶ್ ಕಾಮತ್ , ಸುಬ್ರಹ್ಮಣ್ಯ ಜಿ , ಶಿಶಾಂತ್ , ನಿಹಾಲ್ , ಸಾಗರಿಕ , ನಿಶಾನ್ , ರಿಯಾ ಜಾನಿ ಪ್ರಮಾಣ ವಚನ ಸ್ವೀಕರಿಸಿದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…