ಮಂಗಳೂರು:ಕುವೈತ್‌ನಲ್ಲಿ ಉದ್ಯೋಗ ವಂಚನೆಗೆ ಒಳಗಾಗಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ಪೈಕಿ, ಕರಾವಳಿ ಮೂಲದ 19 ಮಂದಿ ಯುವಕರು ಮರಳಿ ತವರು ಸೇರಿದ್ದಾರೆ.
ನಷೂದ್ (ಮಂಜೇಶ್ವರ), ವರುಣ್ (ಆಕಾಶ್ ಭವನ), ಕಲಂದರ್ ಶಫೀಕ್ (ಮೂಡುಬಿದಿರೆ), ನಷೂದ್ (ಕೊಪ್ಪ), ರಫೀಕ್ (ಕೊಪ್ಪ), ಯಕೂಬ್ ಮುಲ್ಲಾ ( ಶಿರ್ಸಿ), ಪಾರ್ಲ್ಟ್ರಿಕ್ ಫೆರ್ನಾಂಡಿಸ್ (ಭಟ್ಕಳ), ಜಗದೀಶ್, ಆಶೀಕ್ (ಉಡುಪಿ), ಪಾರ್ಥಿಕ್ (ಉಡುಪಿ), ಮಹಮ್ಮದ್ ಹಸನ್ (ಕೊಲ್ನಾಡು), ಮಹಮ್ಮದ್ ಇಸ್ಮಾಯಿಲ್ (ಕೊಲ್ನಾಡು), ಅಬ್ದುಲ್ ಮಸೀದ್ (ಕಾರ್ಕಳ), ಮಹಮ್ಮದ್ ಸುಹೇಲ್ (ಉಳ್ಳಾಲ), ನೌಫಾಲ್ ಹುಸೈನ್ (ಉಳ್ಳಾಲ), ಮಹಮ್ಮದ್ ಶಕೀರ್ (ಉಳ್ಳಾಲ), ಅಬ್ದುಲ್ ಲತೀಫ್ (ತುಂಬೆ) ಫಯಾಝ್ (ಕುತ್ತಾರ್), ಅಬುಬಕ್ಕರ್ ಸಿದ್ದೀಕ್ (ಬಜಾಲ್) ತವರಿಗೆ ಬಂದಿಳಿದ ಕರಾವಳಿ ಮೂಲದ ಸಂತ್ರಸ್ತ ಯುವಕರು.
ಈ 19 ಮಂದಿಗೆ ಕುವೈತ್‌ನಿಂದ ಮುಂಬೈಗೆ ವಿಮಾನ ಟಿಕೆಟ್ ಮತ್ತು ಅಲ್ಲಿಂದ ಮಂಗಳೂರಿಗೆ ಬಸ್ ಟಿಕೆಟ್ ಅನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ವ್ಯವಸ್ಥೆ ಮಾಡಿದ್ದರು. ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್‌ನ ಕುವೈತ್ ಶಾಖೆಯ ಮಾಜಿ ಅಧ್ಯಕ್ಷ ಮಂಜೇಶ್ವರ ಮೋಹನದಾಸ್ ಕಾಮತ್, ಅನಿವಾಸಿ ಭಾರತೀಯ ಉದ್ಯಮಿಗಳಾದ ರಾಜ್ ಭಂಡಾರಿ, ವಿಜಯ್ ಫರ್ನಾಂಡಿಸ್ ಕುವೈತ್ ವಿಮಾನ ನಿಲ್ದಾಣದಲ್ಲಿ ಈ ಕಾರ್ಮಿಕರನ್ನು ಬೀಳ್ಕೊಟ್ಟಿದ್ದರು. ಸದ್ಯ 19 ಮಂದಿ ಯುವಕರು ಮರಳಿ ಮಂಗಳೂರು ಸೇರಿದ್ದಾರೆ.
ಯುವಕರ ಬಿಡುಗಡೆ ವಿಚಾರದಲ್ಲಿ ತಕ್ಷಣ ಸ್ಪಂದಿಸಿರುವ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರ ಕಾರ್ಯವೈಖರಿಯನ್ನು ಭಾರತೀಯ ರಾಯಭಾರಿ ಕಚೇರಿಯ ದ್ವಿತೀಯ ಕಾರ್ಯದರ್ಶಿ ಸಿಬಿ ಯು. ಶ್ಲಾಘಿಸಿದ್ದಾರೆ.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…