ಮಡಿಕೇರಿ : ನವಜಾತ ಹೆಣ್ಣಾನೆ ಮರಿಯೊಂದು ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಕುಶಾಲನಗರ ಅತ್ತೂರು ಅರಣ್ಯ ವಲಯದಲ್ಲಿ ನಡೆದಿದೆ.
ಮೀಸಲು ಅರಣ್ಯದ ಕೆರೆಯಲ್ಲಿ ಸುಮಾರು 15 ದಿನ ವಯೋಮಿತಿಯ ಮರಿಯ ಮೃತದೇಹ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಕುಶಾಲನಗರ ವಲಯ ಅರಣ್ಯಾಧಿಕಾರಿ ಅರುಣ್, ಉಪ ವಲಯ ಅರಣ್ಯಾಧಿಕಾರಿ ರಂಜನ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಅಂತ್ಯಕ್ರಿಯೆ ನೆರವೇರಿಸಿದರು. ಕೆರೆಗೆ ನೀರು ಕುಡಿಯಲು ಹಿಂಡಾನೆಗಳು ಬಂದ ಸಂದರ್ಭ ಈ ಘಟನೆ ಸಂಭವಿಸಿರುವ ಸಾಧ್ಯತೆಯಿದೆ ಎಂದು ವಲಯ ಅರಣ್ಯಾಧಿಕಾರಿ ಅರುಣ್ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel