ಮಂಗಳೂರು: ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶ ಹಾಗೂ ಈ ಸಂಬಂಧ ನಿರಂತರವಾಗಿ ಸೇವೆಯಲ್ಲಿ ತೊಡಗಿರುವ ವೈದ್ಯರಿಂದ ತೊಡಗಿ ಎಲ್ಲಾ ವರ್ಗದ ಜನರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಂಜೆ 5 ಗಂಟೆಗೆ ತಮ್ಮ ಕುಟುಂಬದವರೊಂದಿಗೆ ಧವಳಗಿರಿಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟುವ ಮೂಲಕ ಕೊವಿಡ್19 ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಇದೇ ಸಂದರ್ಭ ಶಾಸಕ ಹರೀಶ್ ಪೂಂಜಾ ಅವರು ಮಹಾ ಮೃತ್ಯುಂಜಯ ಮಂತ್ರ ಪಠಣ ಮಾಡಿರುವುದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಿತ್ರ ಸಹಿತ ಹಾಕಿದ್ದಾರೆ. “ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ ಉರ್ವಾರುಕಮಿವ ಬಂಧನಾಮ್ ಮ್ರತ್ಯೋರ್ಮುಕ್ಷೀಯ ಮಾಮೃತಾತ್” ಎಂದು ಮೃತ್ಯುಂಜಯ ಮಂತ್ರ ಬರೆದಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel