ಸುಳ್ಯ: ಗ್ರಾಮೀಣ ಭಾಗದಲ್ಲಿ ಕೃಷಿ ಆಧಾರಿತ ಉದ್ದಿಮೆಯ ಸಾಧನೆಯನ್ನು ಗುರುತಿಸಿ ಸುಳ್ಯ ಜಯನಗರದ ನಿಸರ್ಗ ಇಂಡಸ್ಟ್ರೀಸ್ ನ ಮಾಲಕರಾದ ಕಸ್ತೂರಿಶಂಕರ್ ರವರಿಗೆ ನಿಟ್ಟೆ ಸಂಸ್ಥೆ ಹಾಗೂ ಕರ್ನಾಟಕ ಬ್ಯಾಂಕ್ ನವರ ಪ್ರತಿಷ್ಠಿತ ಎಮ್.ಎಸ್.ಎಮ್.ಈ.ಎಕ್ಸಲೆನ್ಸ್ ಅವಾರ್ಡ್ ಫಾರ್ ಬೆಸ್ಟ್ ರೂರಲ್ ಆಗ್ರೊ ಎಂಟರ್ಪ್ರೈಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಳೆದ 17 ವರ್ಷಗಳಿಂದ ಉತ್ತಮ ಗುಣಮಟ್ಟ ಹಾಗೂ ರಾಸಾಯನಿಕ ರಹಿತ ಶುದ್ಧ ಮಸಾಲ ಹುಡಿಗಳು ಹಾಗೂ ಆಹಾರ ಉತ್ಪನ್ನಗಳನ್ನು ತಯಾರಿಸುವ ಗುರಿಯೊಂದಿಗೆ ಪ್ರಾರಂಭಿಸಿದ ನಿಸರ್ಗಾ ಇಂಡೀಸ್ಟ್ರೀಸ್ ಇಂದು 30ಕ್ಕೂ ಹೆಚ್ಚಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ತನ್ನ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚಿನ ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಇವರ ಈ ಸಾಧನೆಯನ್ನು ಪರಿಗಣಿಸಿ ಡಿ.7ರಂದು ಮಂಗಳೂರಿನ ಒಶನ್ ಪರ್ಲ್ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಎಮ್.ಎಸ್.ಎಮ್.ಈ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…