Advertisement
ಸುದ್ದಿಗಳು

ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಟಿ.ಡಿ.ಎಸ್‍ ವಿನಾಯಿತಿ : ಕ್ಯಾಂಪ್ಕೊಅಭಿನಂದನೆ

Share

ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್‍ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್‍ ಠಾಕೂರ್‍ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 hour ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago