ಪುತ್ತೂರು:ಕೃಷಿಯು ನಂಬಿದವರನ್ನು ಕೈಬಿಡದು. ನಾವೂ ಕೃಷಿಯನ್ನು ಕೈಬಿಡಬಾರದು. ಕಳೆದ ಹಲವು ವರ್ಷಗಳ ಕೃಷಿ ಬದುಕಿನಲ್ಲಿ ಸಂತೋಷವಿದೆ. ಸಾರ್ಥಕ ಬದುಕು ಕಾಣಲು ಸಾಧ್ಯವಾಗಿದೆ ಎಂದು ಕೃಷಿಕ, ನಿವೃತ್ತ ಶಿಕ್ಷಕ ವಾಟೆ ಮಹಾಲಿಂಗ ಭಟ್ ಹೇಳಿದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಭೆಯು ಪುತ್ತೂರಿನ ಎಳ್ಮುಡಿಯಲ್ಲಿರುವ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಸಂಘದ ಹಿರಿಯ ಸದಸ್ಯ ವಾಟೆ ಮಹಾಲಿಂಗ ಭಟ್ ಅವರನ್ನು ಗೌರವಿಸಲಾಯಿತು.ಸಂಘದ ನಿಕಟಪೂರ್ವ ಅದ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅಭಿನಂದಿಸಿ ಮಾತನಾಡಿ, ವಾಟೆಯವರಿಂದ ಕಲಿಯುವುದಕ್ಕೆ ಸಾಕಷ್ಟಿದೆ. ಅವರು ಸತತ ಕಲಿಕೆಯಲ್ಲಿ ತೊಡಗಿಕೊಂಡವರು. ಜೀವನವನ್ನು ಅನುಭವಿಸಿದ್ದಾರೆ. ಹೀಗಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಗೌರವ ಸ್ವೀಕರಿಸಿ ಮಾತನಾಡಿದ ವಾಟೆ ಮಹಾಲಿಂಗ ಭಟ್,ಕೃಷಿಕರು ಅನುಭವಗಳನ್ನು ಹಂಚಿಕೊಳ್ಳಬೇಕು. ಕೃಷಿ ಯಾವತ್ತೂ ಕೈಬಿಡದು. ಆದರೆ ಕೃಷಿಕರ ನಡುವೆ ಪರಸ್ಪರ ಸಂವಹನ ನಡೆಯಬೇಕು. ಹೀಗಾದರೆ ಕೃಷಿ ಇನ್ನಷ್ಟು ಗಟ್ಟಿಯಾಗಲು ಸಾಧ್ಯ. ಅನುಭವ ಉಳ್ಳವರು ಕೃಷಿ ಸಂಘಟನೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತಾಗಬೇಕು ಎಂದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಉಪಾದ್ಯಕ್ಷ ಎಂ ಜಿ ಸತ್ಯನಾರಾಯಣ, ಹಿರಿಯ ಸದಸ್ಯ ದಯಾನಂದ ಕೋಟೆ ಮಾತನಾಡಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು.
ಅಧ್ಯಕ್ಷ ಅಶೋಕ್ ಕಿನಿಲ ಸ್ವಾಗತಿಸಿ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.