ಮಡಿಕೇರಿ : ಕೆಎಸ್‍ಆರ್‍ಟಿಸಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಬೇರೊಂದು ವಾಹನಕ್ಕೆ ಡಿಕ್ಕಿ ಹೊಡೆದು 50 ಅಡಿ ಆಳದ ಪ್ರಪಾತಕ್ಕೆ ಉರುಳಿದ ಘಟನೆ ಮಡಿಕೇರಿ ಹೊರವಲಯದ ಸ್ಯಾಂಡಲ್‍ಕಾಡ್ ಬಳಿ ನಡೆದಿದೆ. ಈ ಘಟನೆಯಿಂದ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ.
ಪ್ರಪಾತದ ಕಾಫಿ ತೋಟದಲ್ಲಿ ಸಂಪೂರ್ಣ ನೀರಿನಿಂದ ಭರ್ತಿಯಾಗಿದ್ದ ದೊಡ್ಡ ಕೆರೆಯೂ ಇದ್ದು, ಬಸ್ ಬ್ರೇಕ್ ಫೇಲ್ ಆದ ಸಮಯದಲ್ಲೂ ಬಸ್ ಅನ್ನು ಕೆರೆಗೆ ಬೀಳದಂತೆ ನಿಯಂತ್ರಿಸಿದ್ದಾರೆ. ಬಸ್ ಚಾಲಕನ ಪ್ರಜ್ಞೆಯಿಂದಾಗಿ ಮುಂದಾಗಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಬಸ್ ಡಿಕ್ಕಿಯಿಂದಾಗಿ ಚವರ್ಲೆಟ್ ವಾಹನದ ಹಿಂಭಾಗ ಜಖಂ ಆಗಿದ್ದು, ಈ ವಾಹನದಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…