ಕೆಎಸ್‍ಎಸ್ ಕಾಲೇಜು : ರೋವರ್ಸ್ ರೇಂಜರ್ಸ್‍ನ ವಿಶೇಷ ತರಬೇತಿ ಶಿಬಿರ

July 9, 2019
1:00 PM

ಸುಬ್ರಹ್ಮಣ್ಯ :ವಿದ್ಯಾರ್ಥಿಗಳು. ಶೈಕ್ಷಣಿಕ ವರ್ಷದಲ್ಲಿ ಸೇವಾ ಚಟುವಟಿಕೆಯಲ್ಲಿ ತೊಡಗಿದರೆ ಅದು ಜೀವಿತ ಅವಧಿಯ ತನಕವೂ ಸಹಾಯಕ್ಕೆ ಬರುತ್ತದೆ ಎಂದು ಕೆಎಸ್‍ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್ ಹೇಳಿದರು.

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯದಲ್ಲಿ ಕಾಲೇಜಿನ ರೋವರ್ಸ್ ರೇಂಜರ್ಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಡೆದ ಎರಡು ದಿನಗಳ ವಿಶೇಷ ತರಬೇತಿ ಶಿಬಿರ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವಾಮನೋಭಾವನೆ ಉಂಟು ಮಾಡುವಲ್ಲಿ ರೋವರ್ಸ್ ರೇಂಜರ್ಸ್ ಕೊಡುಗೆ ಮಹತ್ವದ್ದು ಎಂವರು ಹೇಳಿದರು.

ಕಾಲೇಜಿನ ಉಪಪ್ರಾಂಶುಪಾಲೆ ಡಾ. ಉಷಾ ಅಂಕೋಲ್ಕರ್ ಅಧ್ಯಕ್ಷತೆ ವಹಿಸಿದ್ದರು. ರೇಂಜರ್ಸ್ ರೋವರ್ಸ್‍ನ ಪಂಜ ಸ್ಥಳಿಯ ಸಂಸ್ಥೆಗಳ ತರಬೇತುದಾರ ದಾಮೋದರ್ ನೇರಳೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾಲೇಜು ರೋವರ್ಸ್‍ನ ಮುಖ್ಯಸ್ಥರಾದ ಮನೋಹರ್,ರಾಮ್‍ಪ್ರಸಾದ್ ಎಸ್, ಹಾಗೂ ರೇಂಜರ್ಸ್‍ನ ಮುಖ್ಯಸ್ಥರಾದ ಪ್ರಮೀಳ, ಸುಮಿತ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧನ್ಯ ಸ್ವಾಗತಿಸಿ, ಪವಿತ್ರ ವಂದಿಸಿದರು. ಅಕ್ಷತಾ.ಪಿಸಿ ಕಾರ್ಯಕ್ರಮ ನಿರೂಪಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ
March 16, 2025
7:53 AM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ
March 16, 2025
7:36 AM
by: The Rural Mirror ಸುದ್ದಿಜಾಲ
ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
March 16, 2025
7:29 AM
by: The Rural Mirror ಸುದ್ದಿಜಾಲ
ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ
March 16, 2025
7:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror