ಸುಬ್ರಹ್ಮಣ್ಯ :ವಿದ್ಯಾರ್ಥಿಗಳು. ಶೈಕ್ಷಣಿಕ ವರ್ಷದಲ್ಲಿ ಸೇವಾ ಚಟುವಟಿಕೆಯಲ್ಲಿ ತೊಡಗಿದರೆ ಅದು ಜೀವಿತ ಅವಧಿಯ ತನಕವೂ ಸಹಾಯಕ್ಕೆ ಬರುತ್ತದೆ ಎಂದು ಕೆಎಸ್‍ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್ ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯದಲ್ಲಿ ಕಾಲೇಜಿನ ರೋವರ್ಸ್ ರೇಂಜರ್ಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಡೆದ ಎರಡು ದಿನಗಳ ವಿಶೇಷ ತರಬೇತಿ ಶಿಬಿರ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವಾಮನೋಭಾವನೆ ಉಂಟು ಮಾಡುವಲ್ಲಿ ರೋವರ್ಸ್ ರೇಂಜರ್ಸ್ ಕೊಡುಗೆ ಮಹತ್ವದ್ದು ಎಂವರು ಹೇಳಿದರು.
ಕಾಲೇಜಿನ ಉಪಪ್ರಾಂಶುಪಾಲೆ ಡಾ. ಉಷಾ ಅಂಕೋಲ್ಕರ್ ಅಧ್ಯಕ್ಷತೆ ವಹಿಸಿದ್ದರು. ರೇಂಜರ್ಸ್ ರೋವರ್ಸ್‍ನ ಪಂಜ ಸ್ಥಳಿಯ ಸಂಸ್ಥೆಗಳ ತರಬೇತುದಾರ ದಾಮೋದರ್ ನೇರಳೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾಲೇಜು ರೋವರ್ಸ್‍ನ ಮುಖ್ಯಸ್ಥರಾದ ಮನೋಹರ್,ರಾಮ್‍ಪ್ರಸಾದ್ ಎಸ್, ಹಾಗೂ ರೇಂಜರ್ಸ್‍ನ ಮುಖ್ಯಸ್ಥರಾದ ಪ್ರಮೀಳ, ಸುಮಿತ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಧನ್ಯ ಸ್ವಾಗತಿಸಿ, ಪವಿತ್ರ ವಂದಿಸಿದರು. ಅಕ್ಷತಾ.ಪಿಸಿ ಕಾರ್ಯಕ್ರಮ ನಿರೂಪಿಸಿದರು.
ಇಂದು ರಾಷ್ಟ್ರೀಯ ರೈತ ದಿನ. ಈ ದೇಶದಲ್ಲಿ ಕೃಷಿಯ ಪ್ರಾಧಾನ್ಯತೆ ಬಹಳಷ್ಟಿದೆ. ಕೃಷಿಗಾಗಿ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿ.26 ರಂದು ತಮಿಳುನಾಡು ಕರಾವಳಿಯ ಬಳಿ ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಶಾಲಾ ವಠಾರದಲ್ಲಿ ಪಾವಂಜೆ ಶ್ರೀ ಜ್ಞಾನಶಕ್ತಿ…
23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
ಒಡಿಶಾ ರಾಜ್ಯ ಸರ್ಕಾರವು ಕೃಷಿಯಲ್ಲಿ ಹೊಸವಿಧಾನಗಳ, ಪರ್ಯಾಯ ಕೃಷಿಯ ಪಾತ್ರವನ್ನು ಪರೋಕ್ಷವಾಗಿ ಕೃಷಿಕರಿಗೆ…