ಸುಬ್ರಹ್ಮಣ್ಯ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ದೆಹಲಿ ಕರ್ನಾಟಕ ಸಂಘ ನವದೆಹಲಿಯಲ್ಲಿ ಆಯೋಜಿಸಿದ್ದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಸಂಸ್ಕøತಿ ಸೌರಭ ಕಲಾವಿದರ ತಂಡ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ಜನ ಮೆಚ್ಚುಗೆಗೆ ಪಾತ್ರವಾಗಿದೆ.
ತಂಡವು ದೇಶದ ವಿವಿಧ ರಾಜ್ಯಗಳ ಜಾನಪದ ನೃತ್ಯಗಳನ್ನು ಪ್ರಸ್ತುತ ಪಡಿಸಿತು. ತಂಡದ ಸಂಯೋಜಕರಾದ ಪ್ರೊ.ಬಾಲಕೃಷ್ಣ ಪೈ ಅವರ ಮಾರ್ಗದರ್ಶನದಲ್ಲಿ ನೃತ್ಯಗುರು ಪ್ರಮೋದ್ ಕುಮಾರ್ ರೈ ಬೆಳ್ಳಾರೆ ನಿರ್ದೇಶನದಲ್ಲಿ ಅದಿತಿ ರೈ ಅವರ ನಾಯಕತ್ವದಲ್ಲಿ 45 ಮಂದಿ ಸದಸ್ಯರಿರುವ ಕಲಾವಿದರ ತಂಡವು ವಿವಿಧ ಕಾರ್ಯಕ್ರಮ ನೀಡಿತು.
ಭರತನಾಟ್ಯ, ಕರಾವಳಿಯ ಗಂಡುಕಲೆ ಯಕ್ಷಗಾನ, ಶ್ರೀಲಂಕಾದ ನವಿಲು ನೃತ್ಯ, ಗಣೇಶ ಸ್ತುತಿ, ಕುವೆಂಪು ಗೀತೆಗಳ ನೃತ್ಯ, ಪಾಶ್ಚಾತ್ಯ ನೃತ್ಯಗಳನ್ನು ಪ್ರಸ್ತುತ ಪಡಿಸಿ ಯಶಸ್ವಿ ಕಲಾವಿದರ ತಂಡ ಎಂದೆನಿಸಿಕೊಂಡಿತು. ಕಲಾವಿದ ಸುಜಿತ್ ಅವರು ಕುವೆಂಪು ಹಾಡಿಗೆ ರಚಿಸಿದ ಕುವೆಂಪುರವರ ಚಿತ್ರ ದೆಹಲಿ ಕರ್ನಾಟಕ ಸಂಘಕ್ಕೆ ಕೊಡುಗೆಯಾಗಿ ನೀಡಲಾಯಿತು.
ಸಂಸ್ಕøತಿ ಸೌರಭವ ತಂಡದ ಸಂಯೋಜಕ ಪ್ರೊ ಬಾಲಕೃಷ್ಣ ಪೈ ಅವರನ್ನು ದೆಹಲಿ ಕರ್ನಾಟಕ ಸಂಘದ ಪರವಾಗಿ ಸಮ್ಮಾನಿಸಿ ಗೌರವಿಸಲಾಯಿತು. ಭಾಗವಹಿಸಿದ ಎಲ್ಲ ಕಲಾವಿದರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌವಿಸಲಾಯಿತು. ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಡಾ. ವೆಂಕಟಾಚಲ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಸಿ.ಎಂ ನಾಗರಾಜ್, ಜತೆ ಕಾರ್ಯದರ್ಶಿ ಪೂಜಾ ಪ್ರದೀಪ್ ರಾವ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಮೋಹನದಾಸ್ ರೈ, ಸೌಮ್ಯ ಬಿ ಪೈ ಮೊದಲಾದವರು ಉಪಸ್ಥಿತರಿದ್ದರು.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…