ಧರ್ಮಸ್ಥಳ : ಜನರಿಗಾಗಿ, ಜನರಿಂದಲೇ ಕೆರೆಗಳ ಹೂಳೆತ್ತುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಮಾಡಲಾಗುತ್ತಿದೆ. ಇದರಿಂದಾಗಿ ಬಯಲು ಸೀಮೆಯ ಎಲ್ಲಾ ಕುಟುಂಬಗಳಿಗೆ ಕುಡಿಯಲು ಹಾಗೂ ಕೃಷಿಗೆ ಬೇಕಾದಷ್ಟು ನೀರು ಒದಗಿಸಲಾಗುವುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕಡಾ.ಎಲ್.ಎಚ್.ಮಂಜುನಾಥ್ ಹೇಳಿದರು.
ಅವರು ಕೆರೆ ಸಂಜೀವಿನಿ ನೋಡಲ್ ಅಧಿಕಾರಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 63 ಕೆರೆಗಳ ಹೂಳೆತ್ತಲು ಅನುದಾನ ಮಂಜೂರಾಗಿದ್ದು ದುಂದು ವೆಚ್ಚ ಮಾಡದೆ ಅನುದಾನವನ್ನು ವಿನಿಯೋಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮಾಹಿತಿ, ಮಾರ್ಗದರ್ಶನ ನೀಡಿದರು.
ಕೆರೆ ವಿಭಾಗದ ನಿರ್ದೇಶಕ ಲಕ್ಷ್ಮಣ್, ಎಂ.ಮತ್ತುಯೋಜನಾಧಿಕಾರಿ ಪ್ರವೀಣ್‍ಕುಮಾರ್, ಎಂಜಿನಿಯರ್ ಸಂಕೇತ್, ತಾಂತ್ರಿಕತಜ್ಞ ಡಿ.ಜಿ. ವೆಂಕಟರಾಮಯ್ಯ, ಬೂದಪ್ಪಗೌಡ ಅಧಿಕಾರಿಗಳಿಗೆ ತರಬೇತಿ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ 32 ನೋಡಲ್ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದರು.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…