ಸುಳ್ಯ: ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಕೆವಿಜಿ ಸೈನ್ಸ್ ಟ್ಯಾಲೆಂಟ್ ಹಂಟ್ ಕಾರ್ಯಕ್ರಮ ನ. 12 ರಂದು ನಡೆಯಿತು. ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾಪ್ರಸಾದ್ ಕೆ.ವಿ.ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ಉಪಪ್ರಾಂಶುಪಾಲ ಶ್ರೀಧರ್, ಪ್ರೊ. ಉಜ್ವಲ್ ಯು.ಜೆ., ಉಪನ್ಯಾಸಕರುಗಳಾದ ಪ್ರಮೋದ್ ಕೆ., ಅನಿಲ್ ಬಿ.ವಿ. ವೇದಿಕೆಯಲ್ಲಿದ್ದರು. ಸುಳ್ಯ ತಾಲೂಕು ಹಾಗೂ ಕೊಡಗಿನ ವಿವಿಧ ಕಾಲೇಜುಗಳಿಂದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಸೈನ್ಸ್ ಮೋಡೆಲ್ ಸ್ಪರ್ಧೆಯಲ್ಲಿ ಭಾಗವಹಿಸಿದರು.
ವಿದ್ಯಾರ್ಥಿಗಳಿಗೆ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಗ್ರಂಥಾಲಯ, ಪ್ರಯೋಗಾಲಯಗಳ ಸಂದರ್ಶನ, ವಿವಿಧ ವಿಷಯಗಳ, ತಾಂತ್ರಿಕ ಉಪಕರಣಗಳ ಬಗ್ಗೆ ಮಾಹಿತಿ ನೀಡಲಾಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel