ಸುಳ್ಯ: ದೇಶ ಅಭಿವೃದ್ಧಿಯಾಗಬೇಕಾದರೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಿ ಶಿಕ್ಷಣದ ಬೆಳಕು ಎಲ್ಲಡೆ ಹರಿಯುವಂತಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಕೆ.ವಿ.ಜಿ ವಿದ್ಯಾಸಂಸ್ಥೆಗಳ ಸ್ಥಾಪಕ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ವತಿಯಿಂದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ನಡೆದ ಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದಿಂದ ಮಾತ್ರ ದೇಶದಲ್ಲಿ ಸಮಾನತೆ ತರಲು ಸಾಧ್ಯ. ಆದುದರಿಂದ ದೇಶ ಅಭಿವೃದ್ಧಿಯಾಗಲು ಮತ್ತು ಸಮಾನತೆ ನೆಲೆಸಲು ಎಲ್ಲಾ ರೀತಿಯ ಉನ್ನತ ಶಿಕ್ಷಣ ಎಲ್ಲರಿಗೂ ದೊರೆಯುವಂತಾಗಬೇಕು ಎಂದರು. ಡಾ.ಕುರುಂಜಿಯವರು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶ್ರೇಷ್ಠ ಶಿಕ್ಷಣವನ್ನು ಧಾರೆಯೆರೆದಿದ್ದಾರೆ ಎಂದು ಅವರು ಸ್ಮರಿಸಿದರು.
ಮಡಿಕೇರಿ ಆಕಾಶವಾಣಿಯ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಡಾ.ಕೆ.ವಿ.ಜಿ ಸಂಸ್ಮರಣಾ ಭಾಷಣ ಮಾಡಿದರು. ಡಾ.ಕುರುಂಜಿಯವರು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಸಹಸ್ರಾರು ವಿದ್ಯಾರ್ಥಿಗಳನ್ನು ಬೆಳೆಸಿದ್ದಾರೆ. ಜೊತೆಗೆ ಸುಳ್ಯವನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಬೆಳೆಯಲು ಕಾರಣರಾಗಿದ್ದಾರೆ ಎಂದು ಹೇಳಿದರು.
ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್‍ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿಯ ನಿರ್ದೇಶಕರಾದ ಶೋಭಾ ಚಿದಾನಂದ, ಕೆ.ವಿ.ಹೇಮನಾಥ್, ಅಕ್ಷಯ್ ಕೆ.ಸಿ, ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಶೀಲಾ ಜಿ ನಾಯಕ್, ಪ್ರಾಂಶುಪಾಲೆ ಸತ್ಯವತಿ, ದಂತ ಮಹಾ ವಿದ್ಯಾಲದ ಪ್ರಾಂಶುಪಾಲೆ ಮೋಕ್ಷಾ ನಾಯಕ್, ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಶೆಟ್ಟರ್, ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನ ಪ್ರಾಂಶುಪಾಲ ಸುನಿಲ್ ಕುಮಾರ್, ಭಾಗಮಂಡಲ ಐಟಿಐ ಕಾಲೇಜಿನ ಪ್ರಾಂಶುಪಾಲ ಶ್ರೀಕಾಂತ್, ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು, ನರ್ಸಿಂಗ್ ಕಾಲೇಜು ಪ್ರಾಂಶುಪಾಲೆಯರಾದ ಚಂದ್ರಾವತಿ, ಪ್ರೇಮ, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೆವಿಜಿ ಇಂಗ್ಲೀಷ್ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಾ ಬೈಪಡಿತ್ತಾಯ ಆಶಯ ಗೀತೆ ಹಾಡಿದರು. ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್ ಸ್ವಾಗತಿಸಿದರು. ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ ಮತ್ತು ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧಾ ರಾಮಚಂದ್ರ ಅತಿಥಿಗಳ ಪರಿಚಯ ಮಾಡಿದರು. ಕೆ.ವಿ.ಜಿ ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಲೀಲಾಧರ್ ಡಿ.ವಿ. ವಂದಿಸಿದರು. ಭವಾನಿಶಂಕರ ಅಡ್ತಲೆ, ಬೇಬಿ ವಿದ್ಯಾ, ಅನಿಲ್ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದಲ್ಲಿ ಎಂ.ವೀರಪ್ಪ ಮೊಯ್ಲಿ ಮತ್ತು ಸುಬ್ರಾಯ ಸಂಪಾಜೆ ಅವರನ್ನು ಸನ್ಮಾನಿಸಲಾಯಿತು. ಸಮಾರಂಭಕ್ಕೆ ಮುನ್ನ ಅತಿಥಿಗಳು ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಗಣ್ಯರು ಹಾರಾರ್ಪಣೆ ಮಾಡಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು,…
ಮಾನಸಿಕ ವಿಕಲಚೇತನರಾಗಿ ಉಡುಪಿಯಲ್ಲಿ ರಸ್ತೆ ಬದಿ ತಿರುಗಾಡುತ್ತಿದ್ದ ಬಿಹಾರದ ರಮಾದೇವಿ ಅವರು ವರ್ಷದ…
ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…