ಸುಳ್ಯ: ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಮೂರು ದಿನಗಳ ಕಾಲ ನಡೆದ ಸುಳ್ಯ ಹಬ್ಬ ಸಮಾಪನಗೊಂಡಿತು.
ಸಮಾರೋಪ ಸಮಾರಂಭದಲ್ಲಿ ಪ್ರಗತಿಪರ ಕೃಷಿಕ ವಿಲಿಯಂ ಲಸ್ರಾದೋ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಸಂಶೋಧಕ ರಾಘವ ಗೌಡ ಪಲ್ಲತ್ತಡ್ಕ ಅವರಿಗೆ ಕೆ.ವಿ.ಜಿ ಸಾಧನಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿರಿಯ ಸಹಕಾರಿ ಜಾಕೆ ಮಾಧವ ಗೌಡ ಪ್ರಶಸ್ತಿ ಪ್ರದಾನ ಮಾಡಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.
ನೆಹರೂ ಸ್ಮಾರಕ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪೂವಪ್ಪ ಕಣಿಯೂರು ಕೆ.ವಿ.ಜಿ.ಸಂಸ್ಮರಣಾ ಭಾಷಣ ಮಾಡಿದರು. ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಕೋಶಾಧಿಕಾರಿ ಬಿ.ಟಿ.ಮಾಧವ, ಸನ್ಮಾನ ಸಮಿತಿ ಸಂಚಾಲಕ ಗಂಗಾಧರ ಮಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಂತ ರೈ ಗೋಂಟಡ್ಕ ವಂದಿಸಿದರು. ರಮ್ಯ ದಿಲೀಪ್ ಬಾಬ್ಲುಬೆಟ್ಟು ಪ್ರಾರ್ಥಿಸಿದರು. ಸುಶ್ಮಿತ ಕಡಪಳ ಕಾರ್ಯಕ್ರಮ ನಿರೂಪಿಸಿದರು.