ಸುಳ್ಯ: ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನ ದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಅಂಗವಾಗಿ ಸಾಧಕರನ್ನು ಸನ್ಮಾನಿಸಲಾಯಿತು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ.ಮಾಧವ ಪೆರಾಜೆ(ಸಾಹಿತ್ಯ), ಡಾ.ರಂಗನಾಥ್(ವೈದ್ಯಕೀಯ), ರಾಮಚಂದ್ರ ಭಟ್(ಸಾಹಸಿ ಉದ್ಯಮಿ), ಪದ್ಮಾ ರಂಗನಾಥ್(ಶಿಕ್ಷಣ), ಸಿಂಚನಾ ಡಿ ಗೌಡ(ಸಾಹಸ ಕ್ರೀಡೆ) ಅವರನ್ನು ಸನ್ಮಾನಿಸಲಾಯಿತು.
ಶಾಸಕ ಎಸ್.ಅಂಗಾರ ಸನ್ಮಾನ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಮುಖ್ಯ ಅತಿಥಿಯಾಗಿದ್ದರು. ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಜಯಂತ ರೈ ಗೋಂಟಡ್ಕ, ಕೋಶಾಧಿಕಾರಿ ಬಿ.ಟಿ.ಮಾಧವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಚಂದ್ರಶೇಖರ ಪೇರಾಲು ಸ್ವಾಗತಿಸಿದರು. ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…