ಸುಬ್ರಹ್ಮಣ್ಯ :ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನಲ್ಲಿ ಪ್ರಥಮ ಆಂಗ್ಲ ಭಾಷೆ ಐಚ್ಚಿಕ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಮಾತನಾಡಿದರು. ಆಂಗ್ಲಭಾಷೆಗೆ ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆ ಇದೆ. ಇಂಗ್ಲಿಷ್ ಮಾಧ್ಯಮ ಇಂದು ಸಾರ್ವತ್ರಿಕವಾಗುತ್ತಿದೆ. ಆಂಗ್ಲಭಾಷೆಗೆ ಜತೆಗೆ ಇತರೆ ಬಾಷೆಗಳನ್ನು ಪ್ರೀತಿಸಿ ಒಡನಾಟ ಹೊಂದಿರಬೇಕು ಎಂದರು.
ವೇದಿಕೆಯಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ. ಗೋವಿಂದ ಎನ್ ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಂತಿಮ ಐಚ್ಚಿಕ ವಿದ್ಯಾರ್ಥಿಗಳು ಆಯೋಜಿಸಿದ್ದರು. ಈ ವೇಳೆ ಸಸಿಗಳನ್ನು ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯಾಗಿ ನೀಡಲಾಯಿತು. ಅಕ್ಷತಾ ಪಿ.ಕೆ ವಂದಿಸಿದರು. ಯೋಗಿತ ಕಾರ್ಯಕ್ರಮ ನಿರ್ವಹಿಸಿದರು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…