ಸುಳ್ಯ: ಡಿ.7 ರಂದು ಸುಳ್ಯದ ಕೆ.ವಿ.ಜಿ. ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಭ್ರಮದಿಂದ ಜರುಗಿತು.
ಕೆ.ವಿ.ಜಿ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಚಿದಾನಂದ ಬಾಳಿಲ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾಲೇಜಿನ ಪ್ರಾಚಾರ್ಯರಾದ ಡಾ.ಯಶೋದಾ ರಾಮಚಂದ್ರ ಸಭಾಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯ ಬಳಿಕ ಪ್ರಾಚಾರ್ಯರಾದ ಡಾ.ಯಶೋದಾ ರಾಮಚಂದ್ರ ಎಲ್ಲರನ್ನೂ ಸ್ವಾಗತಿಸಿದರು. ಆಕರ್ಷಕ ಪಥ ಸಂಚಲನದೊಂದಿಗೆ ಕ್ರೀಡಾ ಜ್ಯೋತಿಯನ್ನು ಬೆಳಗಿಸಲಾಯಿತು. ಕಾಲೇಜಿನ ಕ್ರೀಡಾ ಧ್ವಜಾರೋಹಣ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಅತಿಥಿಗಳು ಸದೃಢ ಶರೀರದಲ್ಲಿ ಸದೃಢ ಮನಸ್ಸಿರುತ್ತದೆ. ಮಕ್ಕಳನ್ನು ಅರೋಗ್ಯಕರ ನಾಗರಿಕರನ್ನಾಗಿ ಮಾಡುವಲ್ಲಿ ಆಟೋಟಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಆ ನಿಟ್ಟಿನಲ್ಲಿ ಎಲ್ಲರೂ ಕ್ರೀಡಾ ಮನೋಭಾವದಿಂದ ಆಟೋಟಗಳಲ್ಲಿ ಭಾಗವಹಿಸಿ ಎಂದರು.
ಕೆ.ವಿ.ಜಿ. ಐ.ಪಿ.ಎಸ್ ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ. ಹಾಗೂ ಉಪಪ್ರಾಚಾರ್ಯರಾದ ದೀಪಕ್.ವೈ.ಆರ್ ಉಪಸ್ಥಿತರಿದ್ದರು. ಉಪನ್ಯಾಸಕಿಯರಾದ ಶೋಭಾ ಮತ್ತು ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿನಿಯರಿಂದ ಆಕರ್ಷಕ ಏರೋಬಿಕ್ಸ್ ನೃತ್ಯ ಮೂಡಿಬಂತು. ಕಾಲೇಜಿನ ನಾಲ್ಕು ತಂಡಗಳಾದ ಅಚೀವರ್ಸ್, ಬಿಲ್ಡರ್ಸ್, ಕ್ರಿಯೇಟರ್ಸ್ ಹಾಗೂ ಡೆವಲಪರ್ಸ್ ಇವುಗಳ ನಡುವೆ ನಡೆದ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಬಿಲ್ಡರ್ಸ್ ತಂಡವು ಪ್ರಥಮ ಸ್ಥಾನ ಗಳಿಸಿ ಡೆವಲಪರ್ಸ್ ತಂಡವು ಎರಡನೇ ಸ್ಥಾನ ಗಳಿಸಿತು. ಅಪರಾಹ್ನ ಸಮಾರೋಪದ ಬಳಿಕ ಕ್ರೀಡಾ ಧ್ವಜಾವರೋಹಣದ ನಂತರ ರಾಷ್ಟ್ರ ಗೀತೆಯೊಂದಿಗೆ ಕ್ರೀಡಾಕೂಟ ಸಂಪನ್ನವಾಯಿತು.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…