ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕೆ.ವಿ.ಜಿ. ಸೈನ್ಸ್ ಟಾಲೆಂಟ್ ಹಂಟ್ – 2019

November 7, 2019
1:28 PM

ಸುಳ್ಯ: ಸುಳ್ಯದ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ನ.9 ಶನಿವಾರದಂದು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ `ಕೆ.ವಿ.ಜಿ. ಸೈನ್ಸ್ ಟಾಲೆಂಟ್ ಹಂಟ್ – 2019′ ಎಂಬ ಒಂದು ದಿನದ ಸಂವಾದ, ಸಂದರ್ಶನ ಮತ್ತು ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Advertisement
Advertisement
Advertisement
Advertisement

ಈ ಕಾರ್ಯಕ್ರಮದ ಅಂಗವಾಗಿ ತಜ್ಞರೊಂದಿಗೆ `ವಿಜ್ಞಾನ, ತಂತ್ರಜ್ಞಾನ ಮತ್ತು ಮುಂದಿನ ಅವಕಾಶ’ ಎಂಬ ಸಂವಾದ ವೇದಿಕೆಯನ್ನು ಆಯೋಜಿಸಲಾಗಿದೆ. ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಗ್ರಂಥಾಲಯ, ಪ್ರಯೋಗಾಲಯಗಳ ಸಂದರ್ಶನ, ವಿವಿಧ ವಿಷಯಗಳ, ತಾಂತ್ರಿಕ ಉಪಕರಣಗಳ ಬಗ್ಗೆ ಮಾಹಿತಿ ಒದಗಿಸಲು ಈ ಕಾರ್ಯಕ್ರಮದಲ್ಲಿ ಒತ್ತು ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸೈನ್ಸ್ ಮೋಡೆಲ್ ಸ್ಪರ್ಧೆ, ‘ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ’ ಎಂಬ ಪ್ರಚಲಿತ ವಿಷಯದ ಭಾಷಣ ಸ್ಪರ್ಧೆ ಮತ್ತು ವಿಜ್ಞಾನ ರಸಪ್ರಶ್ನೆ ಮತ್ತು ವಿಜ್ಞಾನ ವಿಚಾರ ಸಂಕಿರಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

Advertisement

ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಸುಳ್ಯ, ಪುತ್ತೂರು, ಕೊಡಗು ಹಾಗೂ ಕಾಸರಗೋಡು ಜಿಲ್ಲೆಯ ಪಿ.ಯು.ಸಿ ಸೈನ್ಸ್ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣವನ್ನು ಪ್ರಾಂಶುಪಾಲ ಡಾ. ಎನ್.ಎ. ಜ್ಞಾನೇಶ್ ಮಾಡಲಿದ್ದಾರೆ. ಈ ವಿಜ್ಞಾನ ಪ್ರತಿಭಾನ್ವೇಷಣೆಯ ಕಾರ್ಯಕ್ರಮವನ್ನು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನೋತ್ಸವದ ಅಂಗವಾಗಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಎಒಎಲ್‌ಇ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಕೆ.ವಿ. ಉದ್ಘಾಟಿಸಲಿದ್ದಾರೆ. ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ಬೋದಕ ಹಾಗೂ ಬೋದಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂ ಅಭಿವೃದ್ಧಿ ಕೃಷಿ ಸಾಲ ಎಂದರೇನು..? ರೈತರು ಇದನ್ನು ಪಡೆಯುವುದು ಹೇಗೆ..?
February 16, 2025
11:20 PM
by: ರಮೇಶ್‌ ದೇಲಂಪಾಡಿ
ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ
January 10, 2025
7:03 PM
by: The Rural Mirror ಸುದ್ದಿಜಾಲ
ರಬ್ಬರ್ ಟ್ಯಾಪರ್: ವಿಮಾ ಯೋಜನೆ
January 10, 2025
6:25 AM
by: The Rural Mirror ಸುದ್ದಿಜಾಲ
ರೈತರಿಗೆ ರಿಯಾಯಿತಿ ದರದಲ್ಲಿ‌ ಕೃಷಿ ಉಪಕರಣ ವಿತರಣೆ
December 9, 2024
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror