ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯ: ಪದಾಧಿಕಾರಿಗಳ ಪದಗ್ರಹಣ ಮತ್ತು ಸ್ವಾಗತ ಕಾರ್ಯಕ್ರಮ

October 20, 2019
10:00 AM

ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು  2019-20 ನೇ ಸಾಲಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ಆಸೋಸಿಯೇಶನ್ ಇದರ ಪದಾಧಿಕಾರಿಗಳ ಪದಗ್ರಹಣ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಅಡಿಟೋರಿಯಂನಲ್ಲಿ ಹಮ್ಮಿಕೊಂಡಿತು.

Advertisement
Advertisement

ಮುಖ್ಯ ಅತಿಥಿಗಳಾಗಿ  ಆಗಮಿಸಿದ  ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇದರ ಪ್ರಾಂಶುಪಾಲರಾದ ಸೀತಾರಾಮ ಕೇವಳ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ “ಇನ್ವೋಲ್ವ್ ಟು ಇವೋಲ್ವ್” ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಎ. ಜ್ಞಾನೇಶ್‍ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಸ್ತು, ಗುಣನಡತೆಗಳನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಕಾರ್ಯಕ್ಷಮತೆಯು ಉನ್ನತಮಟ್ಟದಲ್ಲಿರಬೇಕೆಂದು ಕಿವಿಮಾತು ಹೇಳಿದರು.

ವಿಭಾಗದ ಮುಖ್ಯಸ್ಥ ಹಾಗೂ ಅಸೊಸಿಯೇಶನ್‍ನ ಅಧ್ಯಕ್ಷರಾದ ಡಾ. ರವಿಕುಮಾರ್ ಎಂ.ಎಸ್. ಪ್ರಾಸ್ತಾವಿಕ ಭಾಷಣ ಮಾಡಿದರು. ಅಸೋಸಿಯೇಶನ್‍ನ ಸಂಯೋಜಕರಾದ ವಿಭಾಗದ ಪ್ರಾಧ್ಯಾಪಕರುಗಳಾದ ಅಶ್ವಿನಿ ಪಿ. ಮತ್ತು ತೃಪ್ತಿ ಪಿ. ಅತಿಥಿಗಳನ್ನು ಸ್ವಾಗತಿಸಿ, ಅಸೊಸಿಯೇಶನ್‍ನ ಕಾರ್ಯದರ್ಶಿ ಪೂಜ ಹೆಚ್. 2019-20 ನೇ ಸಾಲಿನಲ್ಲಿ ನಡೆದ ವಿಭಾಗದ ವರದಿಯನ್ನು ಸಭೆಗೆ ಮಂಡಿಸಿದರು. ಮಹಿಳಾ ವಿಭಾಗದ ಅಸೊಸಿಯೇಶನ್‍ನ ಕಾರ್ಯದರ್ಶಿ ಅನನ್ಯ ಪದಾಧಿಕಾರಿಗಳನ್ನು ಪರಿಚಯಿಸಿದರು. ಅಸೊಸಿಯೇಶನ್‍ನ ಉಪಾಧ್ಯಕ್ಷರಾದ ಅಭಿಶೇಕ್ ಬಿ.ಎಲ್. ವಂದಿಸಿದರು. ಮೈತ್ರಿ ಮತ್ತು ಮಾಳವಿಕ ಪ್ರಾರ್ಥಿಸಿ, ಸಿಂಚನ ಎ. ಮತ್ತು ಮಸಾಲಿ ಗಿರೀಶ್ ಬಸವರಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement

ವಿಭಾಗದ ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳನ್ನು ಈ ವಿಭಾಗಕ್ಕೆ ಆದರದಿಂದ ಬರಮಾಡಿಕೊಂಡು ವಿವಿಧ ವಿನೋದಾವಳಿ ಕಾರ್ಯಕ್ರಮಗಳನ್ನು ನೀಡಿದರು. ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..
May 17, 2024
4:19 PM
by: The Rural Mirror ಸುದ್ದಿಜಾಲ
ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |
May 17, 2024
3:31 PM
by: The Rural Mirror ಸುದ್ದಿಜಾಲ
ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು
May 17, 2024
2:55 PM
by: The Rural Mirror ಸುದ್ದಿಜಾಲ
ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!
May 17, 2024
2:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror