ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು 2019-20 ನೇ ಸಾಲಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ಆಸೋಸಿಯೇಶನ್ ಇದರ ಪದಾಧಿಕಾರಿಗಳ ಪದಗ್ರಹಣ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಅಡಿಟೋರಿಯಂನಲ್ಲಿ ಹಮ್ಮಿಕೊಂಡಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇದರ ಪ್ರಾಂಶುಪಾಲರಾದ ಸೀತಾರಾಮ ಕೇವಳ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ “ಇನ್ವೋಲ್ವ್ ಟು ಇವೋಲ್ವ್” ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಎ. ಜ್ಞಾನೇಶ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಸ್ತು, ಗುಣನಡತೆಗಳನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಕಾರ್ಯಕ್ಷಮತೆಯು ಉನ್ನತಮಟ್ಟದಲ್ಲಿರಬೇಕೆಂದು ಕಿವಿಮಾತು ಹೇಳಿದರು.
ವಿಭಾಗದ ಮುಖ್ಯಸ್ಥ ಹಾಗೂ ಅಸೊಸಿಯೇಶನ್‍ನ ಅಧ್ಯಕ್ಷರಾದ ಡಾ. ರವಿಕುಮಾರ್ ಎಂ.ಎಸ್. ಪ್ರಾಸ್ತಾವಿಕ ಭಾಷಣ ಮಾಡಿದರು. ಅಸೋಸಿಯೇಶನ್‍ನ ಸಂಯೋಜಕರಾದ ವಿಭಾಗದ ಪ್ರಾಧ್ಯಾಪಕರುಗಳಾದ ಅಶ್ವಿನಿ ಪಿ. ಮತ್ತು ತೃಪ್ತಿ ಪಿ. ಅತಿಥಿಗಳನ್ನು ಸ್ವಾಗತಿಸಿ, ಅಸೊಸಿಯೇಶನ್‍ನ ಕಾರ್ಯದರ್ಶಿ ಪೂಜ ಹೆಚ್. 2019-20 ನೇ ಸಾಲಿನಲ್ಲಿ ನಡೆದ ವಿಭಾಗದ ವರದಿಯನ್ನು ಸಭೆಗೆ ಮಂಡಿಸಿದರು. ಮಹಿಳಾ ವಿಭಾಗದ ಅಸೊಸಿಯೇಶನ್‍ನ ಕಾರ್ಯದರ್ಶಿ ಅನನ್ಯ ಪದಾಧಿಕಾರಿಗಳನ್ನು ಪರಿಚಯಿಸಿದರು. ಅಸೊಸಿಯೇಶನ್‍ನ ಉಪಾಧ್ಯಕ್ಷರಾದ ಅಭಿಶೇಕ್ ಬಿ.ಎಲ್. ವಂದಿಸಿದರು. ಮೈತ್ರಿ ಮತ್ತು ಮಾಳವಿಕ ಪ್ರಾರ್ಥಿಸಿ, ಸಿಂಚನ ಎ. ಮತ್ತು ಮಸಾಲಿ ಗಿರೀಶ್ ಬಸವರಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.
ವಿಭಾಗದ ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳನ್ನು ಈ ವಿಭಾಗಕ್ಕೆ ಆದರದಿಂದ ಬರಮಾಡಿಕೊಂಡು ವಿವಿಧ ವಿನೋದಾವಳಿ ಕಾರ್ಯಕ್ರಮಗಳನ್ನು ನೀಡಿದರು. ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…