ಸುಳ್ಯ: ಕೆ.ವಿ.ಜಿ. ದಂತ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಕೆ.ವಿ.ಜಿ. ಕ್ರೀಡಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾಪ್ರಸಾದ್ ಕೆ.ವಿ. ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಜಗದೀಶ್ ಕುಂಬ್ಳೆ ಕ್ರೀಡಾಕೂಟದ ಧ್ವಜಾರೋಹಣಗೈದು ಶುಭ ಹಾರೈಸಿದರು. ಇವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷಾ ನಾಯಕ್ ಸ್ವಾಗತಿಸಿದರು. ಮುಖ್ಯ ಅತಿಥಿಗಳನ್ನು ಡಾ. ನವೀನ್‌ಕುಮಾರ್ ಪರಿಚಯಿಸಿದರು.
ಈ ಸಂದರ್ಭದಲ್ಲಿ ರಾಜೀವ್‌ಗಾಂಧಿ ಆರೋಗ್ಯ ವಿವಿಯ ಅಂತರ್ ಕಾಲೇಜು ಅತ್ಲೆಟಿಕ್ ಕೂಟದ ಪುರುಷರ ವಿಭಾಗದ ವೈಯಕ್ತಿಕ ಚಾಂಪಿಯನ್ ಆದ ಕಾಲೇಜಿನ ವಿದ್ಯಾರ್ಥಿ ಡಾ.ನೋಯಲ್ ಥಾಮಸ್‌ನ್ನು ಸನ್ಮಾನಿಸಲಾಯಿತು. ಡಾ.ರೇವಂತ್ ಸೂಂತೋಡು ವಂದಿಸಿದರು. ಡಾ.ಜೋಯಿನಾ ಮತ್ತು ಡಾ.ಅಮೃತಾ ಭಟ್ ಕಾರ್ಯಕ್ರಮ ನಿರೂಪಿಸಿದರು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಆಡಳಿತಾಧಿಕಾರಿ ಮಾಧವ ಬಿ.ಟಿ. ಸಹಕರಿಸಿದರು. ಪ್ರೊ.ದಾಮೋದರ ಗೌಡ, ಡಾ.ಎನ್.ಎ.ಜ್ಞಾನೇಶ್, ಎನ್.ಎ.ಜ್ಞಾನೇಶ್, ಸೂರಯ್ಯ ಮತ್ತಿತರರು ಉಪಸ್ಥಿತರಿದ್ದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…