ಸುಳ್ಯ: ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್‍ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವರೆಡ್‍ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಕಾನೂನು ಮಹಾ ವಿದ್ಯಾಲಯದ ಪ್ರಾಚಾರ್ಯ ಉದಯಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಜೀವನದಲ್ಲಿ ಹೊಂದಾಣಿಕೆ ಹಾಗೂ ತ್ಯಾಗ ಮನೋಭಾವ ರೂಢಿಸಿಕೊಳ್ಳಲು ಎನ್ನೆಸ್ಸೆಸ್ ಹಾಗೂ ಯುವರೆಡ್‍ಕ್ರಾಸ್ ಘಟಕಗಳು ಸಹಕಾರಿ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಅದ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಸೆಮೆಸ್ಟೆರ್ ಪರೀಕ್ಷೆಯಲ್ಲಿ ಸಾಧನೆಗೈದ ಸ್ವಯಂ ಸೇವಕರನ್ನು ಅಭಿನಂದಿಸಿದರು.
ಕಾಲೇಜಿನ ವಿದ್ಯಾರ್ಥಿಕ್ಷೇಮಾಧಿಕಾರಿ ಮಧುಕುಮಾರ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಸಮಾರಂಭದ ವೇದಿಕೆಯಲ್ಲಿಎನ್ನೆಸ್ಸೆಸ್‍ಘಟಕ ನಾಯಕರಾದ ಭವಿಷ್ಯತ್, ಸುಬ್ರಹ್ಮಣ್ಯ, ಶರಣ್ಯ ಹಾಗೂ ಗ್ರೀಷ್ಮಉಪಸ್ಥಿತರಿದ್ದರು.
ಭವ್ಯಶ್ರೀಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶರಣ್ಯಾ ಸ್ವಾಗತಿಸಿ, ಹಕೀಂ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…